ADVERTISEMENT

Video | ಬಿಹಾರದ ಬಾಕ್ರಾ ನದಿಗೆ ಹೊಸದಾಗಿ ನಿರ್ಮಿಸಿದ್ದ ಸೇತುವೆ ಕುಸಿತ

ಪಿಟಿಐ
Published 18 ಜೂನ್ 2024, 13:52 IST
Last Updated 18 ಜೂನ್ 2024, 13:52 IST
<div class="paragraphs"><p>ಬಾಕ್ರಾ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆ ಕುಸಿದಿದೆ</p></div>

ಬಾಕ್ರಾ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆ ಕುಸಿದಿದೆ

   

ಪಿಟಿಐ ಚಿತ್ರ

ಅರಾರಿಯಾ (ಬಿಹಾರ): ಬಿಹಾರದ ಅರಾರಿಯಾ ಜಿಲ್ಲೆಯ ಪರಾರಿಯಾ ಗ್ರಾಮದಲ್ಲಿ ಬಾಕ್ರಾ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆಯ ಒಂದು ಭಾಗ ಕುಸಿದಿದೆ.

ADVERTISEMENT

ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಹಾರ ರಾಜ್ಯಸರ್ಕಾರದಿಂದ ಹೊಸದಾಗಿ ಈ ಸೇತುವೆ ನಿರ್ಮಾಣವಾಗಿದ್ದು, ಸಾರ್ವಜನಿಕರ ಸಂಚಾರಕ್ಕೆ ಇನ್ನೂ ಮುಕ್ತವಾಗಿರಲಿಲ್ಲ. ಅಲ್ಲದೆ ಸೇತುವೆಯನ್ನು ಸಂಪರ್ಕಿಸುವ ರಸ್ತೆಯೂ ನಿರ್ಮಾಣವಾಗಿರಲಿಲ್ಲ.

ಈ ಸೇತುವೆ ಅರಾರಿಯ ಜಿಲ್ಲೆಯ ಕುರ್ಸಾ ಕಾಂತ ಮತ್ತು ಸಿಕ್ತ್ಯ ಪ್ರದೇಶಗಳನ್ನು ಸಂಪರ್ಕಿಸುತ್ತಿತ್ತು.

ಘಟನೆಯ ಕುರಿತು ಮಾಹಿತಿ ನೀಡಿರುವ ಪೊಲೀಸ್‌ ಅಧಿಕಾರಿಯೊಬ್ಬರು ‘ಹೊಸದಾಗಿ ನಿರ್ಮಿಸಲಾದ ಸೇತುವೆಯ ಒಂದು ಭಾಗ ಕುಸಿದಿದೆ. ಪರಿಶೀಲನೆ ನಡೆಸಲು ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದಾರೆ’ ಎಂದರು.

‘ನಿರ್ಮಾಣ ಸಂಸ್ಥೆಯ ಮಾಲೀಕನ ನಿರ್ಲಕ್ಷದಿಂದಾಗಿ ಸೇತುವೆ ಕುಸಿದಿದೆ. ಈ ಬಗ್ಗೆ ತನಿಖೆ ನಡೆಸಬೇಕೆಂದು ಸರ್ಕಾರಕ್ಕೆ ಆಗ್ರಹಿಸುತ್ತೇವೆ ಎಂದು ಸ್ಥಳೀಯ ಶಾಸಕಿ ವಿಜಯ ಕುಮಾರಿ ಎಎನ್‌ಐಗೆ ಪ್ರತಿಕ್ರಿಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.