ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿ ಶಿವಾಜಿ ಪಾಟೀಲ್ ಅವರು ಗೆಲುವು ಸಾಧಿಸಿದ್ದಕ್ಕೆ ಸಂಭ್ರಮಾಚರಣೆ ಮಾಡುವ ವೇಳೆ ಬೆಂಕಿ ಹೊತ್ತಿಕೊಂಡಿದ್ದು ಶಿವಾಜಿ ಗಾಯಗೊಂಡಿದ್ದಾರೆ.
ಶನಿವಾರ ರಾತ್ರಿ ರಸ್ತೆಯಲ್ಲಿ ಮಹಿಳೆಯೊಬ್ಬರು ಶಿವಾಜಿ ಅವರಿಗೆ ಆರತಿ ಬೆಳಗುತ್ತಿದ್ದ ವೆಳೆ ಕ್ರೇನ್‌ನಿಂದ ಗುಲಾಲ್ ಸುರಿಯಲಾಗಿದೆ. ಇದು ಆರತಿ ಮೇಲೆ ಬಿದ್ದು ಬೆಂಕಿ ಹೊತ್ತಿಕೊಂಡಿದೆ.
ಘಟನೆಯಲ್ಲಿ ಶಿವಾಜಿ ಅವರೊಂದಿಗೆ ಕೆಲವು ಮಹಿಳೆಯರೂ ಗಾಯಗೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.
ಬೆಂಕಿ ಹೊತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ.
ಶಿವಾಜಿ ಪಾಟೀಲ್ ಅವರು ಪಶ್ಚಿಮ ಮಹಾರಾಷ್ಟ್ರದ ಚಾಂದ್‌ಗಾದ್ ಕ್ಷೇತ್ರದಲ್ಲಿ ಎನ್‌ಸಿಪಿಯ ರಾಜೇಶ್ ಪಾಟೀಲ್ ಅವರನ್ನು ಸೋಲಿಸಿ, 24,134 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.