ADVERTISEMENT

VIDEO: ಚುನಾವಣಾ ಬಾಂಡ್‌ ಅಸಾಂವಿಧಾನಿಕ ಎಂದ ಸುಪ್ರೀಂ ಕೋರ್ಟ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಫೆಬ್ರುವರಿ 2024, 13:48 IST
Last Updated 15 ಫೆಬ್ರುವರಿ 2024, 13:48 IST

ಅನಾಮಧೇಯ ಚುನಾವಣಾ ಬಾಂಡ್ ಯೋಜನೆಯು ಮಾಹಿತಿ ಹಕ್ಕು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಲ್ಲದೆ, ಈ ಯೋಜನೆಯು ಅಸಾಂವಿಧಾನಿಕ ಎಂದೂ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಗುರುವಾರ ತಮ್ಮ ತೀರ್ಪಿನಲ್ಲಿ ಹೇಳಿದ್ದಾರೆ. ಖಾಸಗಿತನದ ಮೂಲಭೂತ ಹಕ್ಕು ರಾಜಕೀಯ ಗೋಪ್ಯತೆ ಮತ್ತು ಸಂಬಂಧಿತ ನಾಗರಿಕರ ಹಕ್ಕನ್ನು ಒಳಗೊಂಡಿದೆ ಎಂದು ಪೀಠ ಹೇಳಿದೆ. ತೀರ್ಪಿನ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯ ರಂದೀಪ್‌ ಸಿಂಗ್‌ ಸುರ್ಜೇವಾಲಾ, ‘ಬಿಜೆಪಿಯ ಕಪ್ಪು ಹಣವನ್ನು ಸುಪ್ರೀಂಕೋರ್ಟ್‌ ನಾಶ ಪಡಿಸಿದೆ’ ಎಂದು ಅಭಿಪ್ರಾಯಪಟ್ಟಿದ್ದಾರೆ. ಚುನಾವಣಾ ಬಾಂಡ್‌ಗಳನ್ನು ಕಪ್ಪುಹಣದ ಪರಿವರ್ತಕಗಳಾಗಿ ಬಿಜೆಪಿ ಬಳಸಿಕೊಳ್ಳುತ್ತಿತ್ತು’ ಎಂದೂ ಅವರು ದೂರಿದ್ದಾರೆ. ಇದರೊಂದಿಗೆ, ದಿನದ ಪ್ರಮುಖ ವಿದ್ಯಮಾನಗಳು ಈ ವಿಡಿಯೊದಲ್ಲಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.