ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿ ಬಿಜೆಪಿ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿ ದಾಖಲಿಸಲಾಗಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರಿಗೆ ಸ್ಥಳೀಯ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ. ಈ ಸಂಬಂಧ ರಾಹುಲ್ ಗಾಂಧಿ ಶುಕ್ರವಾರ ಬೆಳಗ್ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖುದ್ದು ಹಾಜರಾದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.