ನವದೆಹಲಿ: ಆನ್‌ಲೈನ್ ಸುದ್ದಿತಾಣ 'ನ್ಯೂಸ್‌ಕ್ಲಿಕ್'ನ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರು ಜಾಮೀನು ಕೋರಿ ದೆಹಲಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ನ್ಯೂಸ್‌ಕ್ಲಿಕ್ ಪ್ರಧಾನ ಸಂಪಾದಕ ಪ್ರಬೀರ್ ಪುರಕಾಯಸ್ಥ ಅವರು, ಪರಿಶೀಲನೆಗಾಗಿ ವಶಪಡಿಸಿಕೊಳ್ಳಲಾಗಿರುವ ವಿದ್ಯುನ್ಮಾನ ಸಾಧನಗಳ ಬಿಡುಗಡೆ ಮಾಡುವಂತೆ ದೆಹಲಿ ಪೊಲೀಸರಿಗೆ ಸೂಚನೆ ನೀಡಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ಚಕ್ರವರ್ತಿ ಹಾಗೂ ಪುರಕಾಯಸ್ಥ ಅವರು ಸಲ್ಲಿಸಿರುವ ಮನವಿಗಳಿಗೆ ಪ್ರತಿಕ್ರಿಯಿಸುವಂತೆ ದೆಹಲಿ ಪೊಲೀಸರಿಗೆ ಪಟಿಯಾಲ ನ್ಯಾಯಾಲಯ ಸೂಚಿಸಿದೆ.
'ನ್ಯೂಸ್‌ಕ್ಲಿಕ್' ಸುದ್ದಿತಾಣವು ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ (ಎಫ್‌ಸಿಆರ್‌ಎ) ಉಲ್ಲಂಘಿಸಿ ವಿದೇಶದಿಂದ ಹಣ ಪಡೆದಿದೆ ಎಂಬ ಆರೋಪದ ಮೇಲೆ ಈ ಇಬ್ಬರನ್ನು ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿಯಲ್ಲಿ (ಯುಎಪಿಎ) ಅಡಿಯಲ್ಲಿ ದೆಹಲಿ ಪೊಲೀಸರು ಅಕ್ಟೋಬರ್ 3ರಂದು ಬಂಧಿಸಿದ್ದಾರೆ.
ಇದರ ಬೆನ್ನಲ್ಲೇ, 'ನ್ಯೂಸ್‌ಕ್ಲಿಕ್' ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.