ADVERTISEMENT

ಠೇವಣಿ ಇರಿಸಲು ಆದೇಶಿಸುವ ಅಧಿಕಾರ ಎನ್.ಜಿ.ಟಿಗಿಲ್ಲ: ಸುಪ್ರೀಂ ಕೋರ್ಟ್

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2020, 19:08 IST
Last Updated 29 ಆಗಸ್ಟ್ 2020, 19:08 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌   

ನವದೆಹಲಿ: ತನ್ನ ಆದೇಶದ ಜಾರಿಗೆ ಖಾತರಿಯಾಗಿ ದೊಡ್ಡ ಮೊತ್ತವನ್ನು ಠೇವಣಿಯಾಗಿ ಇರಿಸುವಂತೆ ರಾಜ್ಯಗಳಿಗೆ ಸೂಚಿಸುವ ಅಧಿಕಾರ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ (ಎನ್.ಜಿ.ಟಿ) ಇಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ ಮತ್ತು ಇಂದಿರಾ ಬ್ಯಾನರ್ಜಿ ಅವರಿದ್ದ ನ್ಯಾಯಪೀಠವು, ರಾಜ್ಯ ಸರ್ಕಾರಿ ಇಲಾಖೆಗಳ ಪ್ರಮಾದಗಳಿಗೆ ಅನ್ವಯಿಸುವ ಪರಿಸರ ಸಂರಕ್ಷಣಾ ಕಾಯ್ದೆ, ಆದೇಶ ಮತ್ತು ನಿಯಮಗಳಲ್ಲಿ ಖಾತರಿಯಾಗಿ ಹಣ ಠೇವಣಿ ಇರಿಸಲು ಸೂಚಿಸುವ ಅವಕಾಶ ಕಲ್ಪಿಸುವುದಿಲ್ಲ ಎಂದು ಅಭಿಪ್ರಾಯಪಟ್ಟಿತು.

ಎನ್.ಜಿ.ಟಿ ಕಾಯ್ದೆಯಲ್ಲಿ ಇದಕ್ಕೆ ಅವಕಾಶವಿಲ್ಲ. ಆದರೆ, ದಂಡ ವಿಧಿಸಲು ಅವಕಾಶವಿದೆ ಎಂಬುದನ್ನು ಪೀಠವು ಪ್ರಮುಖವಾಗಿ ಉಲ್ಲೇಖಿಸಿದೆ. 25 ಕೋಟಿ ಠೇವಣಿ ಇಡಬೇಕು ಎಂದು ಮಧ್ಯಪ್ರದೇಶ ಸರ್ಕಾರಕ್ಕೆ 2015ರ ಏಪ್ರಿಲ್ ತಿಂಗಳು ಎನ್.ಜಿ.ಟಿ ನೀಡಿದ್ದ ಆದೇಶಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ವೇಳೆ, ಈ ತೀರ್ಪು ನೀಡಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.