ಬೆಂಗಳೂರು: ಕನಿಷ್ಠ ಅವಧಿಯಲ್ಲಿ ಗರಿಷ್ಠ ಉದ್ದದ ರಸ್ತೆಯನ್ನು ನಿರ್ಮಿಸಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಗಿನ್ನಿಸ್ ದಾಖಲೆ ಮಾಡಿದೆ.
ರಾಷ್ಟ್ರೀಯ ಹೆದ್ದಾರಿ 53ರಲ್ಲಿ ಅಮರಾವತಿಯಿಂದ ಅಕೋಳಾದವರೆಗಿನ 75 ಕಿ.ಮೀ. ದೂರವನ್ನು 105 ಗಂಟೆ ಮತ್ತು 33 ನಿಮಿಷಗಳಲ್ಲಿ ಡಾಮರೀಕರಣ ಮಾಡಲಾಗಿದೆ.
ಈ ಕುರಿತು ಕೇಂದ್ರ ಸಚಿವ ನಿತಿನ್ ಗಡ್ಕರಿ ಮಾಹಿತಿ ಹಂಚಿಕೊಂಡಿದ್ದು, ಜೂನ್ 3ರಿಂದ 7ರವರೆಗೆ ನಡೆದ ಕಾಮಗಾರಿಯಲ್ಲಿ ಕಡಿಮೆ ಅವಧಿಯಲ್ಲೇ ಅತಿ ಹೆಚ್ಚಿನ ಉದ್ದದ ರಸ್ತೆ ನಿರ್ಮಾಣ ಕಾರ್ಯ ಪೂರೈಸಲಾಗಿದೆ ಎಂದಿದ್ದಾರೆ.
ಜತೆಗೆ, ಇದನ್ನು ಗಮನಿಸಿರುವ ಗಿನ್ನಿಸ್ ಸಂಸ್ಥೆ, ದಾಖಲೆಯ ಕುರಿತು ಪ್ರಮಾಣಪತ್ರ ನೀಡಿದೆ.
ಸಚಿವ ಗಡ್ಕರಿ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.