ಮುಂಬೈ: ಬಂಧಿತ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯಿ ಸಹೋದರ ಅನ್ಮೋಲ್ ಸುಳಿವು ನೀಡಿದವರಿಗೆ ₹ 10 ಲಕ್ಷ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಶುಕ್ರವಾರ ಘೋಷಿಸಿದೆ.
ಈ ಬಗ್ಗೆ 'ಎಎನ್‌ಐ' ಸುದ್ದಿಸಂಸ್ಥೆ ವರದಿ ಮಾಡಿದೆ.
ಎನ್‌ಐಎ 2022ರಲ್ಲಿ ದಾಖಲಿಸಿರುವ ಎರಡು ಪ್ರಕರಣಗಳಲ್ಲಿ ಅನ್ಮೋಲ್ ವಿರುದ್ಧ ಆರೋಪಪಟ್ಟಿ ಸಲ್ಲಿಕೆಯಾಗಿದೆ.
ಏತನ್ಮಧ್ಯೆ, ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಇತ್ತೀಚೆಗೆ ಗುಂಡು ಹಾರಿಸಿದ್ದ ಶೂಟರ್‌ಗಳು, ಅನ್ಮೋಲ್ ಸೂಚನೆ ಮೇರೆಗೆ ನಟನನ್ನು ಕೊಲ್ಲುವುದಕ್ಕಾಗಿ ಕೃತ್ಯ ನಡೆಸಿದ್ದಾಗಿ ಪೊಲೀಸ್ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ ಎಂದೂ ವರದಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.