ADVERTISEMENT

ರೋಹಿಂಗ್ಯಾಗಳ ಕಳ್ಳಸಾಗಣೆ: 8 ಮಂದಿ ವಿರುದ್ಧ ಚಾರ್ಜ್ ಶೀಟ್

ಪಿಟಿಐ
Published 24 ಜೂನ್ 2024, 15:43 IST
Last Updated 24 ಜೂನ್ 2024, 15:43 IST
<div class="paragraphs"><p>ಸಾಂದರ್ಭಿಕ ಚಿತ್ರ&nbsp;</p></div>

ಸಾಂದರ್ಭಿಕ ಚಿತ್ರ 

   

ನವದೆಹಲಿ: ನಕಲಿ ದಾಖಲೆ ಸೃಷ್ಟಿಸಿ ರೋಹಿಂಗ್ಯಾಗಳು ಮತ್ತು ಬಾಂಗ್ಲಾದೇಶಿಗರನ್ನು ಭಾರತಕ್ಕೆ ಕಳ್ಳಸಾಗಣೆ ಮಾಡುತ್ತಿದ್ದಆರೋಪ ಹೊತ್ತ ಎಂಟು ಮಂದಿ ವಿರುದ್ಧ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಸೋಮವಾರ ದೋಷಾರೋಪ ಪಟ್ಟಿ ದಾಖಲಿಸಿದೆ.

ಗುವಾಹಟಿಯ ವಿಶೇಷ ನ್ಯಾಯಾಲಯದಲ್ಲಿ ಪೂರಕ ದೋಷಾರೋಪ ಪಟ್ಟಿಯನ್ನು ಸಲ್ಲಿಸಲಾಗಿದೆ ಎಂದು ಎನ್‌ಐಎ ಹೇಳಿಕೆಯಲ್ಲಿ ತಿಳಿಸಿದೆ.

ADVERTISEMENT

ಆರೋಪಿಗಳ ಪೈಕಿ ಬಾಂಗ್ಲಾದೇಶದ ಪ್ರಜೆ ರಬಿಯಲ್‌ ಹಸನ್‌ ಅಲಿಯಾಸ್‌ ರಬಿಯುಲ್‌ ಹಸನ್‌ ಸಹ ಒಬ್ಬ. ಅಸ್ಸಾಂ, ಪಶ್ಚಿಮ ಬಂಗಾಳ, ತ್ರಿಪುರಾ, ತಮಿಳುನಾಡು ಮತ್ತು ಕರ್ನಾಟಕದಲ್ಲಿ ಬಂಧಿಸಿರುವ ಆರೋಪಿಗಳೊಂದಿಗೆ ಈತ ಸಂಪರ್ಕ ಹೊಂದಿದ್ದ ಎಂದು ತನಿಖೆ ವೇಳೆ ತಿಳಿದಿದೆ ಎಂದು ಹೇಳಿದೆ.

ಇದಕ್ಕೂ ಮುನ್ನ 24 ಮಂದಿ ಬಾಂಗ್ಲಾ ಪ್ರಜೆಗಳ ವಿರುದ್ಧ ಎನ್ಐಎ ದೋಷಾರೋಪ ಪಟ್ಟಿ ದಾಖಲಿಸಿದೆ.

ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳು ಮತ್ತು ಇತರ ಶಂಕಿತರ ಪತ್ತೆಗೆ ಎನ್‌ಐಎ ತನಿಖೆ ನಡೆಸುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.