ADVERTISEMENT

ಉಗ್ರ ಹರ್‌ಪ್ರೀತ್ ಸಿಂಗ್ ಮಾಹಿತಿ ನೀಡಿದವರಿಗೆ ₹10 ಲಕ್ಷ: ಎನ್‌ಐಎ ಘೋಷಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಸೆಪ್ಟೆಂಬರ್ 2022, 16:08 IST
Last Updated 7 ಸೆಪ್ಟೆಂಬರ್ 2022, 16:08 IST
ರಾಷ್ಟ್ರೀಯ ತನಿಖಾ ದಳ
ರಾಷ್ಟ್ರೀಯ ತನಿಖಾ ದಳ   

ನವದೆಹಲಿ: ತಲೆಮರೆಸಿಕೊಂಡಿರುವ ಉಗ್ರ ಹರ್‌ಪ್ರೀತ್ ಸಿಂಗ್ ಬಂಧನಕ್ಕೆ ನೆರವಾಗುವ ಮಾಹಿತಿ ಕೊಟ್ಟವರಿಗೆ ₹10 ಲಕ್ಷ ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಘೋಷಿಸಿದೆ.

2021ರ ಡಿಸೆಂಬರ್‌ನಲ್ಲಿ ಪಂಜಾಬ್‌ನ ಲುಧಿಯಾನ ನ್ಯಾಯಾಲಯ ಸಂಕೀರ್ಣದಲ್ಲಿ ಸಂಭವಿಸಿದ್ದ ಬಾಂಬ್ ಸ್ಫೋಟ ಪ್ರಕರಣದಲ್ಲಿ ಹರ್‌ಪ್ರೀತ್ ಸಿಂಗ್ ಪ್ರಮುಖ ಆರೋಪಿಯಾಗಿದ್ದಾನೆ.

ಇಂಟರ್‌ ನ್ಯಾಷನಲ್ ಸಿಖ್ ಯೂತ್ ಫೆಡರೇಶನ್ ಸಂಘಟನೆಗೆ ಸೇರಿರುವ ಹರ್‌ಪ್ರೀತ್ ಸಿಂಗ್ ಪ್ರಸ್ತುತ ಮಲೇಷ್ಯಾದಲ್ಲಿರುವುದಾಗಿ ಎನ್‌ಐಎ ಮಾಹಿತಿ ನೀಡಿದೆ.

ADVERTISEMENT

ಇವನ್ನೂ ಓದಿ:

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.