ಮುಂಬೈ:ಅಮರಾವತಿ ಮೂಲದ ಔಷಧ ವ್ಯಾಪಾರಿ ಉಮೇಶ್ ಕೋಲ್ಹೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಶೇಷ ನ್ಯಾಯಾಲಯಕ್ಕೆ 11 ಮಂದಿ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ.
ನ್ಯಾಯಾಲಯವು ಸೆಪ್ಟೆಂಬರ್‌ನಲ್ಲಿ ಎನ್‌ಐಎಗೆ ಆರೋಪಪಟ್ಟಿ ಸಲ್ಲಿಸಲು ಹೆಚ್ಚುವರಿ 90 ದಿನಗಳ ಕಾಲಾವಕಾಶ ನೀಡಿತ್ತು.
ಪ್ರವಾದಿ ಮೊಹಮ್ಮದ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಅಮಾನತುಗೊಂಡಿದ್ದ ಬಿಜೆಪಿ ನಾಯಕಿ ನೂಪುರ್ ಶರ್ಮಾ ಬೆಂಬಲಿಸುವ ಪೋಸ್ಟ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ನಂತರ ಪೂರ್ವ ಮಹಾರಾಷ್ಟ್ರದ ಅಮರಾವತಿ ನಗರದಲ್ಲಿ 2022ರಜೂನ್ 21 ರಂದು ಕೊಲ್ಹೆ ಅವರನ್ನು ಕೊಲೆ ಮಾಡಲಾಗಿತ್ತು. ಜುಲೈ 2 ರಂದು ಎನ್‌ಐಎ ಪ್ರಕರಣ ದಾಖಲಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.