ADVERTISEMENT

ಉಗ್ರರಿಗೆ ಆರ್ಥಿಕ ನೆರವು: ಜಮ್ಮು ಮತ್ತು ಕಾಶ್ಮೀರದ ಹಲವು ಕಡೆ ಎನ್‌ಐಎ ಶೋಧ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಅಕ್ಟೋಬರ್ 2022, 5:16 IST
Last Updated 11 ಅಕ್ಟೋಬರ್ 2022, 5:16 IST
   

ಶ್ರೀನಗರ: ಭಯೋತ್ಪಾದನೆಗೆ ಆರ್ಥಿಕ ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳು ಜಮ್ಮು ಮತ್ತು ಕಾಶ್ಮೀರದ ಹಲವು ಪ್ರದೇಶಗಳಲ್ಲಿ ಮಂಗಳವಾರಶೋಧ ಕಾರ್ಯಾಚರಣೆ ನಡೆಸಿದ್ದಾರೆ.

ಪೊಲೀಸರು ಹಾಗೂ ಸಿಆರ್‌ಪಿಎಫ್‌ ಸಿಬ್ಬಂದಿ ಜೊತೆಗೆ ತೆರಳಿದಎನ್ಐಎ ಅಧಿಕಾರಿಗಳು ಜಮ್ಮು ಭಾಗದ ಪೂಂಚ್‌, ರಾಜೌರಿ ಮತ್ತು ಕಾಶ್ಮೀರದ ಪುಲ್ವಾಮಾ, ಶೋಪಿಯಾನ್‌, ಶ್ರೀನಗರ, ಬುದಗಾಮ್‌, ಬಂಡಿಪೋರಾ ಜಿಲ್ಲೆಗಳಲ್ಲಿ ಪ್ರತ್ಯೇಕ ಕಾರ್ಯಾಚರಣೆ ನಡೆಸಿದ್ದಾರೆ.

ಸಮುದಾಯವೊಂದರ ಧಾರ್ಮಿಕ ಪ್ರಚಾರಕ ಹಾಗೂ ಮುಖಂಡ ದಾರುಲ್‌–ಉಲ್‌–ಉಲೂಮ್‌ ರಹೀಮಿಯಾ, ಮೌಲಾನಾ ರೆಹಮತುಲ್ಲಾ ಖಾಸ್ಮಿ ಮತ್ತುಎನ್‌ಐಟಿ ಶ್ರೀನಗರದ ಪ್ರಾಧ್ಯಾಪಕ ಸಮಮ್‌ ಅಹ್ಮದ್‌ ಲೋನೆ ಸೇರಿದಂತೆ ಹಲವರ ನಿವಾಸಗಳಲ್ಲಿ ಶೋಧ ನಡೆಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ಉಗ್ರರಿಗೆ ಆರ್ಥಿಕ ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ನಡೆಸಲಾಗುತ್ತಿದೆ ಎಂದೂ ಹೇಳಿದ್ದಾರೆ.

ಉಗ್ರ ಚಟುವಟಿಕೆಗಳಿಗೆ ಹಣಕಾಸು ನೆರವು, ಆತ್ಮಾಹುತಿ ದಾಳಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಎನ್‌ಐಎ, ಜಮ್ಮು ಮತ್ತು ಕಾಶ್ಮೀರದಲ್ಲಿ 2017ರಿಂದ ನಿರಂತರವಾಗಿ ಶೋಧ ಕಾರ್ಯಾಚರಣೆಗಳನ್ನು ನಡೆಸುತ್ತಿದೆ. ಸಾಕಷ್ಟು ಜನರನ್ನು ಬಂಧಿಸಿ ವಿಚಾರಣೆಗೂ ಒಳಪಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.