ನವದೆಹಲಿ: ದೇಶದಾದ್ಯಂತ 8 ರಾಜ್ಯಗಳಲ್ಲಿ ಪಾಪುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ಕಚೇರಿಗಳು ಮತ್ತು ಕಾರ್ಯಕರ್ತರ ಮನೆ ಮೇಲೆ ದಾಳಿ ನಡೆಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಅಧಿಕಾರಿಗಳು 100ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿದ್ದಾರೆ.
ಮಂಗಳವಾರ ಬೆಳಗ್ಗೆಪಿಎಫ್ಐ ಕಾರ್ಯಕರ್ತರಿಗೆ ಎನ್ಐಎ ಮತ್ತೆ ಶಾಕ್ ನೀಡಿದೆ. ರಾಜ್ಯಗಳ ವಿವಿಧ ತನಿಖಾ ಸಂಸ್ಥೆಗಳ ಜೊತೆ ಸೇರಿ ಪಿಎಫ್‌ಐ ಮೇಲೆ ಮತ್ತೊಂದು ಸುತ್ತಿನ ದಾಳಿ ಮಾಡಿದೆ. ಕಳೆದ ಗುರುವಾರ (ಸೆ.22) ಕೂಡ ಎನ್‌ಐಎ ದಾಳಿ ಮಾಡಿ ಪಿಎಫ್‌ಐ ಮುಖಂಡರು ಸೇರಿದಂತೆ 106 ಜನರನ್ನುವಶಕ್ಕೆ ಪಡೆದಿತ್ತು.
ಕರ್ನಾಟಕ, ಗುಜರಾತ್, ದೆಹಲಿ, ಅಸ್ಸಾಂ ಸೇರಿ 8 ರಾಜ್ಯಗಳಲ್ಲಿ ದಾಳಿ ಮಾಡಲಾಗಿದೆ ಎಂದು ವರದಿಯಾಗಿದೆ. ಕರ್ನಾಟಕದ ಉಡುಪಿ, ಶಿವಮೊಗ್ಗ, ಕೋಲಾರ, ಚಿತ್ರದುರ್ಗ, ಚಾಮರಾಜನಗರ ರಾಯಚೂರು, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಎನ್‌ಐಎ ಅಧಿಕಾರಿಗಳು ದಾಳಿ ಮಾಡಿ ಹಲವರನ್ನು ವಶಕ್ಕೆ ಪಡೆದಿದ್ದಾರೆ.
ಬಾಗಲಕೋಟೆಯಲ್ಲಿ 7 ಜನ, ವಿಜಯಪುರದಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ, ಬೆಳಗಾವಿಯಲ್ಲಿ 5 ಜನ, ಚಿತ್ರದುರ್ಗದಲ್ಲಿ ಒಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಉಗ್ರವಾದ, ಭಯೋತ್ಪಾದಕ ಚಟುವಟಿಕೆಗಳಿಗೆ ಧನಸಹಾಯ, ಶಸ್ತ್ರಾಸ್ತ್ರ ತರಬೇತಿ ನೀಡಲು ಶಿಬಿರಗಳ ಆಯೋಜನೆ, ಉಗ್ರವಾದ ಚಟುವಟಿಕೆಗಳಿಗೆ ಪ್ರೆರೇಪಣೆ, ವಿಧ್ವಂಸಕ ಕೃತ್ಯಗಳಲ್ಲಿ ತೊಡಗಿಕೊಳ್ಳುವುದು ಸೇರಿದಂತೆ ಹಲವಾರ ಆರೋಪಗಳನ್ನು ಪಿಎಫ್‌ಐ ಮೇಲೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.