ಬೆಂಗಳೂರು: ರಾಷ್ಟ್ರೀಯ ತನಿಖಾ ದಳದ(NIA) ಅಧಿಕಾರಿಗಳು ಸೋಮವಾರ ಕರ್ನಾಟಕ ಸೇರಿದಂತೆ 9 ರಾಜ್ಯಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿ, ಶೋಧ ನಡೆಸಿದ್ದಾರೆ.
ಭಾರತವನ್ನು ಅಸ್ಥಿರಗೊಳಿಸುವ ಅಲ್ಖೈದಾ ಉಗ್ರ ಸಂಘಟನೆಯ ಸಂಚಿನ ಭಾಗವಾಗಿ ಭಾರತದಲ್ಲಿ ನೆಲೆಸಿರುವ ಬಾಂಗ್ಲಾದೇಶ ಪ್ರಜೆಗಳು ಸಂಘಟನೆಯ (ಅಲ್ ಖೈದಾ) ಜೊತೆಗೆ ನಂಟು ಹೊಂದಿದ್ದಾರೆ ಎಂಬ ಆರೋಪದ ಮೇಲೆ ಈ ದಾಳಿ ನಡೆದಿದೆ.
ಈ ಬಗ್ಗೆ 'ಎಕ್ಸ್'ನಲ್ಲಿ ಮಾಹಿತಿ ಹಂಚಿಕೊಂಡಿರುವ ತನಿಖಾ ಸಂಸ್ಥೆ, ಕರ್ನಾಟಕ, ಜಮ್ಮು ಮತ್ತು ಕಾಶ್ಮೀರ, ಪಶ್ಚಿಮ ಬಂಗಾಳ, ಬಿಹಾರ ಹಾಗೂ ಅಸ್ಸಾಂ ಸೇರಿದಂತೆ 9 ಕಡೆ ದಾಳಿ ನಡೆಸಲಾಗಿದೆ ಎಂದು ತಿಳಿಸಿದೆ .
ಕಾರ್ಯಾಚರಣೆ ವೇಳೆ ಎನ್ಐಎ ಅಧಿಕಾರಿಗಳು ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.