ADVERTISEMENT

ಅಂಬಾನಿ ನಿವಾಸದ ಬಳಿ ಸ್ಫೋಟಕ ವಾಹನ: ಎನ್‌ಐಎ ತನಿಖೆ

ಪಿಟಿಐ
Published 8 ಮಾರ್ಚ್ 2021, 10:53 IST
Last Updated 8 ಮಾರ್ಚ್ 2021, 10:53 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಉದ್ಯಮಿ ಮುಕೇಶ್‌ ಅಂಬಾನಿ ಅವರ ಮುಂಬೈ ನಿವಾಸದ ಸಮೀಪ ಸ್ಫೋಟಕಗಳನ್ನು ತುಂಬಿದ ವಾಹನವನ್ನು ಜಪ್ತಿ ಮಾಡಿರುವ ಪ್ರಕರಣದ ತನಿಖೆಯನ್ನುರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಕೈಗೆತ್ತಿಕೊಂಡಿದೆ.

ಕೇಂದ್ರ ಗೃಹ ಸಚಿವಾಲಯದ ಆದೇಶದಂತೆ ಎನ್‌ಐಎ ಈ ಪ್ರಕರಣವನ್ನುಕೈಗೆತ್ತಿಕೊಳ್ಳುತ್ತಿರುವುದಾಗಿ ತನಿಖಾ ಸಂಸ್ಥೆಯ ಅಧಿಕೃತ ವಕ್ತಾರರು ಸೋಮವಾರ ತಿಳಿಸಿದ್ದಾರೆ.

ಫೆಬ್ರುವರಿ25ರಂದು ಮುಂಬೈನ ಉದ್ಯಮಿ ಮುಕೇಶ್ ಅಂಬಾನಿ ಅವರ ನಿವಾಸದ ಸಮೀಪ 20 ಜಿಲಟಿನ್‌ ಕಡ್ಡಿಗಳಿದ್ದ ಸ್ಕಾರ್ಪಿಯೊ ವಾಹನ ಪತ್ತೆಯಾಗಿತ್ತು. ಪೊಲೀಸರು ಅದನ್ನು ಜಪ್ತಿ ಮಾಡಿದ್ದರು. ‌

ADVERTISEMENT

ಪೊಲೀಸರ ಪ್ರಕಾರ, ಫೆ.18ರಂದು ಐರೊಲಿ–ಮುಲುಂಡ್‌ ಸೇತುವೆಯ ಬಳಿಯಿಂದ ಈ ವಾಹನವನ್ನು ಕಳ್ಳತನವಾಗಿತ್ತು. ಈ ವಾಹನದ ಮಾಲೀಕ ಹಿರೆನ್ ಮನ್ಸುಖ್ ಅವರಮೃತದೇಹಶುಕ್ರವಾರ ಥಾಣೆಯ ಹಳ್ಳವೊಂದರಲ್ಲಿ ಪತ್ತೆಯಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.