ಲೇಹ್: ಸೇನಾಯೋಧರು ಪ್ರಯಾಣಿಸುತ್ತಿದ್ದ ವಾಹನವು ಲಡಾಖ್ನ ಲೇಹ್ ಜಿಲ್ಲೆಯ ಕಿಯಾರಿಯಲ್ಲಿ ಶನಿವಾರ ಕಣಿವೆಗೆ ಉರುಳಿದ್ದು, 9 ಮಂದಿ ಯೋಧರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿದ ವಾಹನ ಸಂಜೆ 4.45ರ ವೇಳೆಗೆ ಆಳವಾದ ಕಣಿವೆಗೆ ಉರುಳಿದೆ. ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಪಿ.ಡಿ.ನಿತ್ಯಾ ಅವರು ತಿಳಿಸಿದ್ದಾರೆ.
ವಾಹನದಲ್ಲಿ 10 ಮಂದಿ ಯೋಧರಿದ್ದರು. ವಾಹನ ಲೇಹ್ನಿಂದ ನ್ಯೋಮಾಗೆ ತೆರಳುತ್ತಿತ್ತು. ತೀವ್ರವಾಗಿ ಗಾಯಗೊಂಡಿರುವ ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.