ಅಗರ್ತಲಾ: ಕೇಂದ್ರ ಬಿಜೆಪಿ ಸರ್ಕಾರ ಒಂಬತ್ತು ವರ್ಷಗಳನ್ನು ಪೂರೈಸಿದ ಅಂಗವಾಗಿ ತ್ರಿಪುರಾದಲ್ಲಿ ಬೃಹತ್ ರ್‍ಯಾಲಿಯನ್ನು ಹಮ್ಮಿಕೊಳ್ಳಲಾಗಿದ್ದು, ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾ ಶನಿವಾರ ಭಾಗವಹಿಸಲಿದ್ದಾರೆ.
ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಮಾಣಿಕ್ ಸಹಾ, ಬಿಜೆಪಿ ರಾಜ್ಯಾಧ್ಯಕ್ಷ ರಾಜೀಬ್ ಭಟ್ಟಾಚಾರ್ಯ ಮತ್ತು ರಾಜ್ಯಸಭಾ ಸಂಸದ ಬಿಪ್ಲಬ್ ಕುಮಾರ್ ದೇಬ್ ಅವರು ನಡ್ಡಾ ಅವರನ್ನು ಶುಕ್ರವಾರ ಸ್ವಾಗತಿಸಿದ್ದಾರೆ.
ಈ ಕುರಿತು ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಮಾಣಿಕ್ ಸಹಾ, ಬಿಜೆಪಿ ರಾಜ್ಯಾಧ್ಯಕ್ಷ ರಾಜೀಬ್ ಭಟ್ಟಾಚಾರ್ಯ ಮತ್ತು ರಾಜ್ಯಸಭಾ ಸಂಸದ ಬಿಪ್ಲಬ್ ಕುಮಾರ್ ದೇಬ್ ಅವರು ನಡ್ಡಾ ಅವರನ್ನು ಶುಕ್ರವಾರ ಸ್ವಾಗತಿಸಿದ್ದಾರೆ.
ಬಿಜೆಪಿಯ ನಾಯಕ ಸಂಬಿತ್ ಪಾತ್ರಾ ಅವರು ಶನಿವಾರ ಕಾರ್ಯಕ್ರಮದ ಕುರಿತು ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದರು. ಮುನ್ನೆಚ್ಚರಿಕೆ ಕ್ರಮವಾಗಿ ಸಂತೀರ್‌ಬಜಾರ್ ಉಪವಿಭಾಗದಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಡ್ಡಾ ಜೀ ಅವರು ಬೆಳಗ್ಗೆ 11 ಗಂಟೆ ಸುಮಾರಿಗೆ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲದೆ, 'ಸಂಪರ್ಕ್ ಸೆ ಸಮರ್ಥನ್' ಭಾಗವಾಗಿ ಅವರು ಅಗರ್ತಲಾದಲ್ಲಿ ಎರಡು ಪ್ರಭಾವಿ ಕುಟುಂಬಗಳನ್ನು ಭೇಟಿಯಾಗಲಿದ್ದಾರೆ.
ನಡ್ಡಾ ಅವರು ಶನಿವಾರ ಮಧ್ಯಾಹ್ನ ತ್ರಿಪುರಾದಿಂದ ಮರಳಲಿದ್ದಾರೆ ಎಂದು ಪಕ್ಷದ ಮುಖಂಡರೊಬ್ಬರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.