ಮಲಪ್ಪುರಂ (ಕೇರಳ): ಮಲಪ್ಪುರಂ ಜಿಲ್ಲೆಯ 14 ವರ್ಷದ ಬಾಲಕನೊಬ್ಬನಿಗೆ ನಿಪಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಕೇರಳದ ಆರೋಗ್ಯ ಸಚಿವರಾದ ವೀಣಾ ಜಾರ್ಜ್ ಶನಿವಾರ ಇಲ್ಲಿ ತಿಳಿಸಿದರು.
ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕನಲ್ಲಿ ನಿಪಾ ಸೋಂಕಿರುವುದನ್ನು ಪುಣೆಯ ರಾಷ್ಟ್ರೀಯ ವೈರಾಣು ಸಂಸ್ಥೆಯು (ಎನ್‌ಐವಿ) ದೃಢಪಡಿಸಿದೆ ಎಂದು ಮಾಧ್ಯಮದವರಿಗೆ ಹೇಳಿದರು.
‘ಸೋಂಕಿತನನ್ನು ಕೋಯಿಕ್ಕೋಡ್‌ನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈತನ ಸಂಪರ್ಕಕ್ಕೆ ಬಂದಿದ್ದವರ ಪತ್ತೆ ನಡೆದಿದೆ. ನಿಕಟ ಸಂಪರ್ಕದಲ್ಲಿದ್ದವರು ಈಗಾಗಲೇ ಪ್ರತ್ಯೇಕ ವಾಸದಲ್ಲಿದ್ದಾರೆ. ಇವರೆಲ್ಲರ ಮಾದರಿಗಳನ್ನು ಪರೀಕ್ಷೆಗೆ ಕಳಿಸಲಾಗಿದೆ’ ಎಂದು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.