ತಿರುವನಂತಪುರ: ‘ಮಲಪ್ಪುರಂ ಜಿಲ್ಲೆಯ ಪಾಂಡಿಕ್ಕಾಡ್ ಪ್ರದೇಶದ ಬಾವಲಿಗಳಲ್ಲಿ ನಿಫಾ ಸೋಂಕು ಇರುವುದು ದೃಢಪಟ್ಟಿದೆ. ಐದು ಕಿ.ಮೀ ವ್ಯಾಪ್ತಿಯಲ್ಲಿ ಸುಮಾರು 27 ಬಾವಲಿಗಳ ಮಾದರಿಗಳನ್ನು ಪರೀಕ್ಷಿಸಲಾಗಿತ್ತು. ಈ ಪೈಕಿ ಆರು ಬಾವಲಿಗಳಲ್ಲಿ ಪ್ರತಿಕಾಯ ಇರುವುದ ಪತ್ತೆಯಾಗಿದೆ’ ಎಂದು ಆರೋಗ್ಯ ಸಚಿವೆ ವೀನಾ ಜಾರ್ಜ್ ಮಾಹಿತಿ ನೀಡಿದ್ದಾರೆ.
‘ಜೂನ್ 21ರಂದು ಮಲಪ್ಪುರಂ ಜಿಲ್ಲೆಯ 14 ವರ್ಷದ ಬಾಲಕ ನಿಫಾ ಸೋಂಕಿನಿಂದ ಮೃತಪಟ್ಟಿದ್ದ. ಬಾಲಕನ ಸಂಪರ್ಕಕ್ಕೆ ಬಂದಿದ್ದವರ ಪರೀಕ್ಷೆಯನ್ನೂ ನಡೆಸಲಾಗಿದೆ. ಅವರೆಲ್ಲರ ವರದಿಗಳು ನೆಗೆಟಿವ್ ಬಂದಿವೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.