ತಿರುವನಂತಪುರಂ: ಕೇರಳ ಮತ್ತೆ ನಿಫಾ ಸೋಂಕಿನ ಭೀತಿಯಲ್ಲಿದೆ. ಇಂದು ಸಂಜೆಯೊಳಗೆ ಶಂಕಿತರ ಪರೀಕ್ಷೆ ವರದಿ ಸಿಗಲಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.
ಇಬ್ಬರು ಮೃತಪಟ್ಟವರ ಮತ್ತು ಶಂಕಿತ ಸೋಂಕಿನ ಮೂವರ ಮಾದರಿಗಳನ್ನು ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ ರವಾನಿಸಲಾಗಿದೆ.
ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ನಿಫಾ ಸೋಂಕಿಗೆ ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಸಂಬಂಧ ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ಸೂಚಿಸಿದೆ.
ನಿಫಾ ಸೋಂಕಿನ ಶಂಕೆ ಹಿನ್ನೆಲೆಯಲ್ಲಿ ಸೋಂಕಿತರ ಸಂಪರ್ಕ ಪತ್ತೆಗೆ ಆರೋಗ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಆರೋಗ್ಯ ಸಚಿವ ವೀಣಾ ಜಾರ್ಜ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದೆ.
2018ರಲ್ಲಿ ನಿಫಾ ವೈರಸ್‌ಗೆ ತುತ್ತಾಗಿದ್ದ ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ 17 ಮಂದಿ ಮೃತಪಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.