ADVERTISEMENT

ನಿರ್ಭಯಾ ಪ್ರಕರಣ: ಅಪರಾಧಿ ಪವನ್ ಮೇಲ್ಮನವಿ ವಜಾಗೊಳಿಸಿದ ಸಾಂವಿಧಾನಿಕ ಪೀಠ

ಪಿಟಿಐ
Published 31 ಜನವರಿ 2020, 12:17 IST
Last Updated 31 ಜನವರಿ 2020, 12:17 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ನಿರ್ಭಯಾ ಪ್ರಕರಣದಲ್ಲಿ ಮರಣದಂಡನೆಗೆ ಗುರಿಯಾಗಿದ್ದ ಅಪರಾಧಿ ಪವನ್‌ ಗುಪ್ತಾ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ.

ಘಟನೆ ನಡೆದಾಗ ನಾನು ಅಪ್ರಾಪ್ತನಾಗಿದ್ದೆ ಆದ ಕಾರಣ ನನ್ನನ್ನು ಮರಣದಂಡನೆಗೆ ಒಳಪಡಿಸದಂತೆ ಅಪರಾಧಿ ಪವನ್ ಗುಪ್ತಾ ಶುಕ್ರವಾರ ಬೆಳಿಗ್ಗೆ ಸಾಂವಿಧಾನಿಕ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದನು. ಅಪರಾಧಿ ಪವನ್ ಗುಪ್ತಾನ ಅರ್ಜಿಯನ್ನು ತ್ರಿಸದಸ್ಯ ಪೀಠ ವಜಾ ಮಾಡಿತ್ತು.

2012ರಲ್ಲಿ ಆರು ಮಂದಿ ಸೇರಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಈ ಸಂಬಂಧ ವಿಚಾರಣೆ ನಡೆಯುವಾಗಲೇ ಒಬ್ಬ ಮೃತಪಟ್ಟಿದ್ದ. ಮತ್ತೊಬ್ಬ ಅಪ್ರಾಪ್ತನಾಗಿದ್ದ ಕಾರಣ ಬಿಡುಗಡೆಗೊಳಿಸಲಾಗಿದ್ದು, ಉಳಿದ ನಾಲ್ಕು ಮಂದಿಗೆ ಮರಣ ದಂಡನೆ ವಿಧಿಸಲಾಗಿದೆ.

ADVERTISEMENT

ಬಜೆಟ್ ಮಾಹಿತಿಗೆ:www.prajavani.net/budget-2020

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.