ಮುಂಬೈ: ರಿಲಾಯನ್ಸ್ ಫೌಂಡೇಶನ್ ಸಂಸ್ಥಾಪಕಿ ನೀತಾ ಅಂಬಾನಿ ಅವರು 2023–24ನೇ ಸಾಲಿನ ‘ಸಿಟಿಜನ್ ಆಫ್ ಮುಂಬೈ’ ಪ್ರಶಸ್ತಿಗೆ ಭಾಜನಾರಾಗಿದ್ದಾರೆ.
ಆರೋಗ್ಯ, ಶಿಕ್ಷಣ, ಕ್ರೀಡೆ, ಸಂಸ್ಕೃತಿ, ಮತ್ತು ಕಲಾ ವಿಭಾಗಕ್ಕೆ ನೀತಾ ಅವರ ಕೊಡುಗೆಯನ್ನು ಪರಿಗಣಿಸಿ ಮುಂಬೈನ ರೋಟರಿ ಕ್ಲಬ್ ಈ ಪ್ರಶಸ್ತಿಯನ್ನು ನೀಡಿದೆ.
ಇಂಡಿಯನ್ ಪ್ರೀಮಿಯರ್ ಲೀಗ್‌ನ (IPL) ಅತ್ಯಂತ ಯಶಸ್ವಿ ಕ್ರಿಕೆಟ್ ತಂಡಗಳಲ್ಲಿ ಒಂದಾದ ಮುಂಬೈ ಇಂಡಿಯನ್ಸ್‌ನ ಮಾಲೀಕರಾದ ನೀತಾ, ಇಂಡಿಯನ್ ಸೂಪರ್ ಲೀಗ್ ಪ್ರಾರಂಭಿಸಿದ ಫುಟ್‌ಬಾಲ್ ಸ್ಪೋರ್ಟ್ಸ್ ಡೆವಲಪ್‌ಮೆಂಟ್ ಲಿಮಿಟೆಡ್‌ನ ಸಂಸ್ಥಾಪಕಿ ಮತ್ತು ಅಧ್ಯಕ್ಷರೂ ಆಗಿದ್ದಾರೆ.
ನೀತಾ ಅಂಬಾನಿ ಅಂತರರಾಷ್ಟ್ರೀಯ ಒಲಿಂಪಿಕ್ ಕಮಿಟಿಯ ಸದಸ್ಯೆಯಾದ ಮೊದಲ ಭಾರತೀಯ ಮಹಿಳೆ. ಅಲ್ಲದೆ ಇವರು ನ್ಯೂಯಾರ್ಕ್‌ನ ಮೆಟ್ರೊಪೊಲಿಟನ್ ಮ್ಯೂಸಿಯಮ್ ಆಫ್ ಆರ್ಟ್‌ನ ಗೌರವ ಟ್ರಸ್ಟಿಯಾದ ಮೊದಲ ಭಾರತೀಯ ಮಹಿಳೆ ಕೂಡ ಆಗಿದ್ದಾರೆ.
ನೀತಾ ಅಂಬಾನಿ ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಅವರ ಪತ್ನಿಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.