ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನೀತಿ ಆಯೋಗದ 9ನೇ ಆಡಳಿತ ಮಂಡಳಿ ಸಭೆ ಶನಿವಾರ ಆರಂಭವಾಗಿದೆ.
ಸಭೆಯು 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಗುರಿಯನ್ನು ಹೊಂದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಸಹಭಾಗಿತ್ವನ್ನು ಉತ್ತೇಜಿಸುವ ಗುರಿಯನ್ನೂ ಹೊಂದಿದೆ.
ನೀತಿ ಆಯೋಗದ ಆಡಳಿತ ಮಂಡಳಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್‌ಗಳು ಮತ್ತು ಹಲವು ಕೇಂದ್ರ ಮಂತ್ರಿಗಳನ್ನು ಒಳಗೊಂಡಿದೆ. ಪ್ರಧಾನಿ ಮೋದಿ ಅವರು ಆಯೋಗದ ಅಧ್ಯಕ್ಷರಾಗಿದ್ದಾರೆ.
ಸಭೆಯು ಕಳೆದ ವರ್ಷ ಡಿಸೆಂಬರ್‌ನಲ್ಲಿ ನಡೆದ ಮುಖ್ಯ ಕಾರ್ಯದರ್ಶಿಗಳ 3ನೇ ರಾಷ್ಟ್ರೀಯ ಸಮ್ಮೇಳನದ ಶಿಫಾರಸುಗಳ ಬಗ್ಗೆಯೂ ಸಭೆ ಗಮನಹರಿಸಲಿದೆ.
ಈ ಸಭೆಯು 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿಸುವ ಗುರಿಯನ್ನು ಸಾಧಿಸುವಲ್ಲಿ ರಾಜ್ಯಗಳ ಪಾತ್ರದ ಕುರಿತು ವಿವರವಾದ ಚರ್ಚೆಗಳನ್ನು ಮಾಡಲಿದೆ ಎಂದು ಸರ್ಕಾರ ತನ್ನ ಹೇಳಿಕೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.