ಪಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ನಂಬಿಗಸ್ತ ಸಹಾಯಕ ಅಶೋಕ್ ಚೌಧರಿ ಅವರನ್ನು ಜೆಡಿಯುದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ.
‘ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಅಶೋಕ್ ಚೌಧರಿ ಅವರನ್ನು ಪಕ್ಷದ ಹಿರಿಯ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ನೇಮಿಸಿದ್ದಾರೆ. ಜೆಡಿಯುನಲ್ಲಿ ಹಲವಾರು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಿದ್ದಾರೆ’ ಎಂದು ಜೆಡಿಯುದ ಮತ್ತೋರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಫಾಕ್ ಅಹ್ಮದ್ ಖಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್ ಚೌಧರಿ, ‘ಈ ಗೌರವವನ್ನು ನೀಡಿದ್ದಕ್ಕಾಗಿ ನಿತೀಶ್ ಕುಮಾರ್ ಅವರಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ. ಸಮತಾ ಪಕ್ಷದ ದಿನಗಳಿಂದ ನಾನು ಪಕ್ಷದಲ್ಲಿ ಇರಲಿಲ್ಲ ಎಂದು ಹಲವರು ನನ್ನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಬಹುದು. ಅದನ್ನು ನಾನು ಅಲ್ಲಗೆಳೆಯುವುದಿಲ್ಲ. ಆದರೆ, ನನ್ನನ್ನು ಹತ್ತಿರದಿಂದ ಬಲ್ಲವರಿಗೆ ಗೊತ್ತು, ಜೆಡಿಯು ಸೇರಿದಾಗಿನಿಂದ ನಾನು ಪಕ್ಷಕ್ಕಾಗಿ ಎಷ್ಟು ದುಡಿದಿದ್ದೇನೆಂದು’ ಎಂದರು.
2018ರಲ್ಲಿ ಕಾಂಗ್ರೆಸ್ ತೊರೆದ ಅಶೋಕ್ ಚೌಧರಿ ಅವರು ಜೆಡಿಯು ಸೇರ್ಪಡೆಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.