ಚೆನ್ನೈ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಇಲ್ಲ ಎಂದು ತಮಿಳುನಾಡಿನ ಪ್ರಮುಖ ವಿರೋಧ ಪಕ್ಷವಾದ ಎಐಎಡಿಎಂಕೆ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಇದೇ ಸಂದರ್ಭದಲ್ಲಿ ‘ಜನರ ನೈಜ ಸಮಸ್ಯೆ’ ಮತ್ತು ಆಡಳಿತಾರೂಢ ಡಿಎಂಕೆ ವೈಫಲ್ಯಗಳನ್ನಿಟ್ಟುಕೊಂಡು ಚುನಾವಣೆ ಎದುರಿಸುವುದಾಗಿ ಅದು ತಿಳಿಸಿದೆ.
ಬಿಜೆಪಿ ಜೊತೆ ಮೈತ್ರಿ ಇಲ್ಲ ಎಂದು ಸ್ಪಷ್ಟಪಡಿಸಿದ್ದರೂ ಪಕ್ಷದ ಪ್ರಮುಖ ನೀತಿ ನಿರ್ಧಾರಗಳನ್ನು ಕೈಗೊಳ್ಳುವ ಸಾಮಾನ್ಯ ಮಂಡಳಿಯ ಸಭೆಯಲ್ಲಿ ಕೈಗೊಂಡ ನಿರ್ಣಯವು ಬಿಜೆಪಿ ಬಗ್ಗೆ ಮೃದುಧೋರಣೆ ಹೊಂದಿದೆ. ಬಿಜೆಪಿ ಮತ್ತು ಕೇಂದ್ರ ಸರ್ಕಾರವನ್ನು ಟೀಕಿಸದಿರಲು ನಿರ್ಧರಿಸಿದೆ.
ಪ್ರಧಾನ ಕಾರ್ಯದರ್ಶಿ ಕೆ.ಪಳನಿಸ್ವಾಮಿ ಅವರು, ರಾಷ್ಟ್ರೀಯ ಪಕ್ಷಗಳು ತಮಿಳುನಾಡಿನ ಬಗ್ಗೆ ಮಲತಾಯಿ ಧೋರಣೆ ತೋರುತ್ತಿವೆ ಎಂದಷ್ಟೇ ಆರೋಪಿಸಿದರು.
‘ಪ್ರಧಾನಿ ಅಭ್ಯರ್ಥಿ ಘೋಷಿಸದೆ ಪಕ್ಷವು ಮತಯಾಚಸಲಿದೆ. ನಿಮ್ಮ ಪ್ರಧಾನಿ ಅಭ್ಯರ್ಥಿ ಯಾರೆಂದು ಕೇಳುತ್ತಾರೆ, ಆದರೆ ನಮಗೆ ಅದರ ಅವಶ್ಯಕತೆ ಇಲ್ಲ. ಜನರೇ ಸರ್ವೋಚ್ಚ ಎಂಬುದಾಗಿ ಭಾವಿಸುತ್ತೇವೆ. ಜನರ ಸಮಸ್ಯೆಯನ್ನು ಸಂಸತ್ತಿಗೆ ಕೊಂಡೊಯ್ಯುವ ಭರವಸೆ ನೀಡಿ ಮತ ಕೇಳುತ್ತೇವೆ’ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.