ನವದೆಹಲಿ: ಸುಪ್ರೀಂಕೋರ್ಟ್ ಕಾರ್ಯವೈಖರಿ ಟೀಕಿಸಿರುವ ಟ್ವೀಟ್‌ಗಳನ್ನು ಡಿಲೀಟ್ ಮಾಡುವುದಿಲ್ಲ. ಈ ಸಂಬಂಧ ಕ್ಷಮೆಯನ್ನೂ ಯಾಚಿಸುವುದಿಲ್ಲ, ದಂಡವನ್ನೂ ಪಾವತಿಸುವುದಿಲ್ಲ ಎಂದು ಸ್ಟಾಂಡ್‌ಅಪ್ ಕಾಮಿಡಿಯನ್ ಕುನಾಲ್ ಕಮ್ರಾ ಸ್ಪಷ್ಟಪಡಿಸಿದ್ದಾರೆ.
ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಂಧಿತರಾಗಿದ್ದ ರಿಪಬ್ಲಿಕ್ ಟಿವಿಯ ಮುಖ್ಯಸ್ಥ ಮತ್ತು ಆಂಕರ್ ಆರ್ನಬ್ ಗೋಸ್ವಾಮಿ ಅವರಿಗೆ ಜಾಮೀನು ನೀಡಿರುವ ಸುಪ್ರೀಂಕೋರ್ಟ್ ನಿರ್ಧಾರವನ್ನು ಕಾಮ್ರಾ ಟ್ವೀಟ್ ಮಾಡಿ ಟೀಕಿಸಿದ್ದರು. 'ತಮಾಷೆಯ ಗೆರೆಯನ್ನು ಕಾಮ್ರಾ ದಾಟಿದ್ದಾರೆ' ಎಂದು ಹೇಳಿದ್ದ ಅಟಾರ್ನಿ ಜನರಲ್ ವೇಣುಗೋಪಾಲ್, ಕಾಮ್ರಾ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ 8 ಮಂದಿಗೆ ಅವಕಾಶ ನೀಡಿದ್ದರು.
'ನನಗೆ ನನ್ನ ಟ್ವೀಟ್‌ಗಳನ್ನು ಹಿಂಪಡೆಯುವ ಉದ್ದೇಶವಿಲ್ಲ. ಅವು ತಮ್ಮಷ್ಟಕ್ಕೆ ಏನು ಹೇಳಬೇಕೋ ಅದನ್ನು ಹೇಳುತ್ತವೆ. ವಕೀಲರು ಇಲ್ಲ, ಕ್ಷಮಾಪಣೆ ಇಲ್ಲ, ದಂಡ ಕಟ್ಟಲ್ಲ, ಜಾಗ ಹಾಳು ಮಾಡಲ್ಲ' ಎಂದು ಕಾಮ್ರಾ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದರು.
'ಸುಪ್ರೀಂಕೋರ್ಟ್ ವಿರುದ್ಧ ಆಧಾರವಿಲ್ಲದೆ,ಕೆಟ್ಟ ರೀತಿಯಲ್ಲಿ ಟೀಕೆ ಮಾಡುವವರನ್ನು ಶಿಕ್ಷೆಗೆ ಗುರಿಪಡಿಸಲಾಗುವುದು' ಎಂಬುದನ್ನು ಜನರಿಗೆ ತಿಳಿಸಬೇಕಿದೆ ಎಂದು ವೇಣುಗೋಪಾಲ್ ವಕೀಲರೊಬ್ಬರಿಗೆ ಬರೆದ ಪ್ರತಿಕ್ರಿಯೆಯಲ್ಲಿ ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.