ADVERTISEMENT

ಜಮ್ಮುಕಾಶ್ಮೀರ ವಿಧಾನಸಭೆ ವಿಸರ್ಜನೆಯಲ್ಲಿ ಬಿಜೆಪಿ ಪಾತ್ರವಿಲ್ಲ: ರಾಜನಾಥ್ ಸಿಂಗ್

ಏಜೆನ್ಸೀಸ್
Published 23 ನವೆಂಬರ್ 2018, 13:08 IST
Last Updated 23 ನವೆಂಬರ್ 2018, 13:08 IST
   

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ವಿಸರ್ಜನೆ ವಿಚಾರ ಸಂಬಂಧ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ತೆಗೆದುಕೊಂಡ ನಿರ್ಧಾರದಲ್ಲಿ ಬಿಜೆಪಿಯ ಪಾತ್ರವಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

‘ರಾಜಕೀಯ ವಿದ್ಯಮಾನವಗಳನ್ನು ಗಮನಿಸಿ ಜಮ್ಮು ಕಾಶ್ಮೀರ ರಾಜ್ಯಪಾಲರು,ಪೀಪಲ್ಸ್‌ ಡೆಮಾಕ್ರಟಿಕ್‌ ಪಾರ್ಟಿ (ಪಿಡಿಪಿ), ನ್ಯಾಷನಲ್‌ ಕಾನ್ಫರೆನ್ಸ್‌ (ಎನ್‌ಸಿ), ಕಾಂಗ್ರೆಸ್‌ ನಡುವಣ ಮೈತ್ರಿಯಿಂದ ಸ್ಥಿರ ಸರ್ಕಾರ ಸಾಧ್ಯವಿಲ್ಲ ಎಂಬ ಅಭಿಪ್ರಾಯಕ್ಕೆ ಬಂದಿದ್ದರು’ ಎಂದ ಸಿಂಗ್‌, ‘ರಾಜ್ಯಪಾಲರು ಈ ನಿರ್ಧಾರ ಕೈಗೊಂಡಿದ್ದಾರೆ.ಇದರಲ್ಲಿ ಬಿಜೆಪಿ ಪಾತ್ರವಿಲ್ಲ. ಕೆಲವರು ಇದರಲ್ಲಿ ಅನಾವಶ್ಯಕವಾಗಿ ಬಿಜೆಪಿಯನ್ನು ಎಳೆದು ತರುತ್ತಿರುವುದುದುರದೃಷ್ಟಕರ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.​

ADVERTISEMENT

ಮಾಜಿ ಮುಖ್ಯಮಂತ್ರಿ ಮುಫ್ತಿ ಮೆಹಬೂಬಾ ಅವರು ಬಹುಮತ ಸಾಭೀತು ಪಡಿಸುವುದಾಗಿ ನೀಡಿದ್ದ ಹೇಳಿಕೆಯನ್ನು ಪ್ರಶ್ನಿಸಿದ ಅವರು, ‘ಕಾಂಗ್ರೆಸ್ ನಾಯಕ ಗುಲಾಮ್ ನಭಿ ಆಜಾದ್ ಅವರು ಪಿಡಿಪಿ ಸರ್ಕಾರ ರಚನೆಗೆ ನಮ್ಮ ಪಕ್ಷಬೆಂಬಲ ನೀಡುವುದಿಲ್ಲ ಎಂದಿದ್ದರು. ಅಕಸ್ಮಾತ್ ಮುಫ್ತಿ ಉತ್ತಮರೇ ಆಗಿದ್ದಲ್ಲಿ ಹೀಗೆ ಯಾಕೆ ಹೇಳಬೇಕಿತ್ತು?’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.