ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಸೋಲಾಗಿದೆ.
ಅವಿಶ್ವಾಸ ನಿರ್ಣಯದ ಮೇಲೆ ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭೆಯಲ್ಲಿ ಮಾತನಾಡಿದ ಬಳಿಕ ಪ್ರಸ್ತಾಪವನ್ನು ಮತಕ್ಕೆ ಹಾಕಲಾಯಿತು.
ಧ್ವನಿ ಮತದ ಮೂಲಕ ಪ್ರತಿಪಕ್ಷಗಳ ನಿರ್ಣಯಕ್ಕೆ ಸೋಲಾಯಿತು.
ಪ್ರಸ್ತಾವವನ್ನು ಮತಕ್ಕೆ ಹಾಕುವುದಕ್ಕೂ ಮುನ್ನವೇ ವಿರೋಧ ಪಕ್ಷಗಳು ಸಭಾತ್ಯಾಗ ಮಾಡಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.