ADVERTISEMENT

ಕೋವಿಡ್‌ ಪರೀಕ್ಷೆಯಿಲ್ಲದೆ ತಾಜ್‌ ಮಹಲ್‌ಗೆ ಪ್ರವೇಶವಿಲ್ಲ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2022, 14:10 IST
Last Updated 22 ಡಿಸೆಂಬರ್ 2022, 14:10 IST
ತಾಜ್‌ ಮಹಲ್‌
ತಾಜ್‌ ಮಹಲ್‌   

ಲಖನೌ: ವಿಶ್ವಪ್ರಸಿದ್ಧ ಪ್ರವಾಸಿ ತಾಣ ತಾಜ್‌ ಮಹಲ್‌ಗೆ ಭೇಟಿ ನೀಡಬಯಸುವ ಪ್ರವಾಸಿಗರು ಕಡ್ಡಾಯವಾಗಿ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಉತ್ತರ ಪ್ರದೇಶ ಸರ್ಕಾರ ಗುರುವಾರ ಸೂಚಿಸಿದೆ.

ಅಲ್ಲದೆ, ರಾಜ್ಯದಲ್ಲಿ ಮುನ್ನೆಚ್ಚರಿಕಾ ಡೋಸ್‌ ಪ್ರಮಾಣವನ್ನು ಹೆಚ್ಚಿಸುವಂತೆಯೂ ಅಲ್ಲಿನ ಸರ್ಕಾರವು ಆರೋಗ್ಯಾಧಿಕಾರಿಗಳಿಗೆ ಹೇಳಿದೆ.

ಚೀನಾದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.