ADVERTISEMENT

ಎನ್‌ಇಇಟಿ–ಯುಜಿ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಗೆ ಸಾಕ್ಷ್ಯ ಇಲ್ಲ: ಪ್ರಧಾನ್

ಪಿಟಿಐ
Published 13 ಜೂನ್ 2024, 12:08 IST
Last Updated 13 ಜೂನ್ 2024, 12:08 IST
   

ನವದೆಹಲಿ: ವೈದ್ಯಕೀಯ ಪ್ರೆವೇಶ ಪರೀಕ್ಷೆ ಎನ್‌ಇಇಟಿ–ಯುಜಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪಗಳನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಳ್ಳಿ ಹಾಕಿದ್ದಾರೆ. ಅದಕ್ಕೆ ಯಾವುದೇ ಆಧಾರವಿಲ್ಲ ಎಂದು ಹೇಳಿದ್ದಾರೆ.

‘ಎನ್‌ಇಇಟಿ–ಯುಜಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬುದಕ್ಕೆ ಯಾವುದೇ ಸಾಕ್ಷ್ಯಧಾರ ಇಲ್ಲ. ಎನ್‌ಟಿಎಯಲ್ಲಿ ಭ್ರಷ್ಟಾಚಾರ ಕುರಿತಂತೆಯೂ ಯಾವುದೇ ಪುರಾವೆ ಸಿಕ್ಕಿಲ್ಲ. ಅದು ಅತ್ಯಂತ ವಿಶ್ವಾಸಾರ್ಹ ಸಂಸ್ಥೆ’ಎಂದು ಪ್ರಧಾನ್ ವರದಿಗಾರರಿಗೆ ಹೇಳಿದ್ದಾರೆ.

‘ಈ ಕುರಿತಂತೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ದು, ನ್ಯಾಯಾಲಯದ ಆದೇಶಕ್ಕೆ ಬದ್ಧವಾಗಿರುತ್ತೇವೆ. ಯಾವುದೇ ವಿದ್ಯಾರ್ಥಿಗೆ ಅನಾನುಕೂಲ ಆಗದೆ ಇರುವುದನ್ನು ಖಚಿತಪಡಿಸುತ್ತೇವೆ’ಎಂದು ಅವರು ಹೇಳಿದ್ದಾರೆ.

ADVERTISEMENT

ಎಂಬಿಬಿಎಸ್, ಬಿಡಿಎಸ್ ಮತ್ತು ಇತರ ಕೋರ್ಸ್‌ಗಳ ಪ್ರವೇಶಕ್ಕಾಗಿ ಎನ್‌ಇಇಟಿ-ಯುಜಿ 2024ರ 1,563 ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನೀಡುವ ನಿರ್ಧಾರವನ್ನು ರದ್ದುಗೊಳಿಸಲಾಗಿದ್ದು, ಜೂನ್ 23ರಂದು ಮರು ಪರೀಕ್ಷೆಯನ್ನು ತೆಗೆದುಕೊಳ್ಳಲು ಅವರಿಗೆ ಅವಕಾಶ ನೀಡಲಾಗುವುದು ಎಂದು ಕೇಂದ್ರವು ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. .

ಈ ಅಭ್ಯರ್ಥಿಗಳು ಮರು ಪರೀಕ್ಷೆಯನ್ನು ತೆಗೆದುಕೊಳ್ಳಲು ಬಯಸದಿದ್ದರೆ, ಗ್ರೇಸ್ ಮಾರ್ಕ್ಸ್ ಹೊರತುಪಡಿಸಿ ಹಿಂದಿನ ಅಂಕಪಟ್ಟಿಯನ್ನೇ ನೀಡಲಾಗುತ್ತದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.