ಭೋಪಾಲ್: ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ವಿರುದ್ಧ ಯಾವುದೇ ಹೋರಾಟವಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಹೇಳಿದ್ದಾರೆ.
ಲೋಕಸಭಾ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು, ಇಂಡಿಯಾ ಕೂಟ 231 ಸ್ಥಾನಗಳಲ್ಲಿ ಮತ್ತು ಎನ್‌ಡಿಎ ಮೈತ್ರಿಕೂಟ 294 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಇತ್ತ ವಿದ್ಯುನ್ಮಾನ ಮತಯಂತ್ರಗಳ ವಿಶ್ವಾಸಾರ್ಹತೆಯ ಬಗ್ಗೆ ನಿರಂತರವಾಗಿ ಪ್ರಶ್ನೆಗಳನ್ನು ಎತ್ತುತ್ತಿದ್ದ ದಿಗ್ವಿಜಯ ಸಿಂಗ್, ಇಂದು(ಮಂಗಳವಾರ) ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಇವಿಎಂಗಳಲ್ಲಿ ಸಮಸ್ಯೆ ಇದ್ದಿದ್ದರೆ, ಉತ್ತರ ಪ್ರದೇಶದಲ್ಲಿ ಅಂತಹ ಫಲಿತಾಂಶ ಬರುತ್ತಿರಲಿಲ್ಲ ಎಂದು ಹೇಳಿದ್ದಾರೆ.
ಇವಿಎಂ ವಿರುದ್ಧ ಯಾವುದೇ ಹೋರಾಟವಿಲ್ಲ. ನಮ್ಮ ಮತಗಳು ನಮ್ಮ ಕೈಯಲ್ಲಿ ಸುರಕ್ಷಿತವಾಗಿ ಚಲಾವಣೆಯಾಗುತ್ತವೆ ಎಂಬ ಭರವಸೆ ಮೂಡಿದೆ. ಆದರೆ ಇವಿಎಂಗಳಲ್ಲಿ ಬಳಸಲಾದ ಸಾಫ್ಟ್‌ವೇರ್‌ನಲ್ಲಿ ನಮಗೆ ನಂಬಿಕೆಯಿಲ್ಲ. ಈ ಬಗ್ಗೆ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.