ADVERTISEMENT

ಸೀಟುಹಂಚಿಕೆ; ಕಾಂಗ್ರೆಸ್‌– ಶಿವಸೇನಾ (ಯುಬಿಟಿ) ಮಧ್ಯೆ ಮೂಡದ ಒಮ್ಮತ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2024, 18:00 IST
Last Updated 10 ಫೆಬ್ರುವರಿ 2024, 18:00 IST
ಮಹಾರಾಷ್ಟ್ರದ ಮುಂಬೈನಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್‌ ರಾಜ್ಯ ಘಟಕದ ಅಧ್ಯಕ್ಷ ನಾನಾ ಪಟೋಲೆ, ಶಿವಸೇನಾ (ಯುಬಿಟಿ) ಅಧ್ಯಕ್ಷ ಉದ್ಧವ್‌ ಠಾಕ್ರೆ ಹಾಗೂ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ ಹಾಜರಿದ್ದರು –ಪಿಟಿಐ ಚಿತ್ರ
ಮಹಾರಾಷ್ಟ್ರದ ಮುಂಬೈನಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್‌ ರಾಜ್ಯ ಘಟಕದ ಅಧ್ಯಕ್ಷ ನಾನಾ ಪಟೋಲೆ, ಶಿವಸೇನಾ (ಯುಬಿಟಿ) ಅಧ್ಯಕ್ಷ ಉದ್ಧವ್‌ ಠಾಕ್ರೆ ಹಾಗೂ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ ಹಾಜರಿದ್ದರು –ಪಿಟಿಐ ಚಿತ್ರ   

ಮುಂಬೈ (ಪಿಟಿಐ): ಮಹಾರಾಷ್ಟ್ರದ ಮಹಾವಿಕಾಸ ಅಘಾಡಿ (ಎಂವಿಎ) ಮೈತ್ರಿಕೂಟ ನಡೆಸುತ್ತಿರುವ ಲೋಕಸಭೆ ಚುನಾವಣೆ ಸೀಟುಹಂಚಿಕೆ ಮಾತುಕತೆಯಲ್ಲಿ ಯಾವುದೇ ಪ್ರಗತಿ ಕಂಡುಬಂದಿಲ್ಲ. ಮುಂಬೈ ಸೇರಿ ರಾಜ್ಯದ ಕೆಲ ಲೋಕಸಭಾ ಕ್ಷೇತ್ರಗಳಿಗಾಗಿ ಎಂವಿಎ ಮಿತ್ರಪಕ್ಷಗಳಾದ ಕಾಂಗ್ರೆಸ್‌ ಮತ್ತು ಯುಬಿಟಿ ಪಟ್ಟುಹಿಡಿದಿವೆ. ಹೀಗಾಗಿ ಮಾತುಕತೆ ಫಲಪ್ರದವಾಗಿಲ್ಲ ಎನ್ನಲಾಗಿದೆ.

ಮಹಾರಾಷ್ಟ್ರ ಕಾಂಗ್ರೆಸ್‌ ಉಸ್ತುವಾರಿ ರಮೇಶ್‌ ಚಿನ್ನಿಥಲಾ ಮತ್ತು ಪಕ್ಷದ ಇತರ ನಾಯಕರು ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್‌ ಠಾಕ್ರೆ ಅವರನ್ನು ಶನಿವಾರ ಭೇಟಿಯಾಗಿ ಮಾತುಕತೆ ನಡೆಸಿದರು. ಶಿವಸೇನಾ (ಯುಬಿಟಿ) ನಾಯಕರಾದ ಆದಿತ್ಯ ಠಾಕ್ರೆ ಮತ್ತು ಸಂಜಯ್‌ ರಾವುತ್‌ ಅವರೂ ಸಭೆಯಲ್ಲಿ ಹಾಜರಿದ್ದರು. ಸಭೆಯಲ್ಲಿ ಯಾವುದೇ ನಿರ್ಣಯಕ್ಕೆ ಬರಲಾಗಿಲ್ಲ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT