ADVERTISEMENT

ಸಿಎಎ: ಯಾರೂ ಪೌರತ್ವ ಕಳೆದುಕೊಳ್ಳುವುದಿಲ್ಲ– ಗೃಹ ಸಚಿವ ಅಮಿತ್‌ ಶಾ

ಪಿಟಿಐ
Published 12 ಮಾರ್ಚ್ 2024, 15:53 IST
Last Updated 12 ಮಾರ್ಚ್ 2024, 15:53 IST
<div class="paragraphs"><p> ಗೃಹ ಸಚಿವ ಅಮಿತ್‌ ಶಾ</p></div>

ಗೃಹ ಸಚಿವ ಅಮಿತ್‌ ಶಾ

   

ಹೈದರಾಬಾದ್‌: ಸಿಎಎ ಹೊಸ ನಿಯಮಗಳಲ್ಲಿ ಯಾರೂ ಪೌರತ್ವವನ್ನು ಕಳೆದುಕೊಳ್ಳುವ ಅವಕಾಶವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಂಗಳವಾರ ಹೇಳಿದರು. 

ಬಿಜೆಪಿಯ ಸಾಮಾಜಿಕ ಜಾಲತಾಣ ನಿರ್ವಹಣೆ ಮಾಡುವ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.

ADVERTISEMENT

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭಾ ಸದಸ್ಯ ಅಸಾದುದ್ದೀನ್ ಒವೈಸಿ ಅವರು ಸಿಎಎ ಅನುಷ್ಠಾನದಿಂದ ದೇಶದ ಅಲ್ಪಸಂಖ್ಯಾತರು ತಮ್ಮ ಪೌರತ್ವವನ್ನು ಕಳೆದುಕೊಳ್ಳುತ್ತಾರೆ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಅಮಿತ್‌ ಶಾ ಹೇಳಿದರು.

ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದಲ್ಲಿ ಧಾರ್ಮಿಕ ಕಿರುಕುಳಕ್ಕೆ ಒಳಗಾದವರಿಗೆ ಪೌರತ್ವ ನೀಡಲಾಗುವುದು ಎಂದು ಸ್ವಾತಂತ್ರ್ಯ ಬಂದಾಗಿನಿಂದಲೂ ಕಾಂಗ್ರೆಸ್ ಹೇಳಿತ್ತು. ಆದರೆ ಅವರು ಮಾಡಲಿಲ್ಲ, ಆದನ್ನು ನಾವು ಮಾಡಿದೆವು. ಇದೀಗ ವೋಟ್ ಬ್ಯಾಂಕ್ ರಾಜಕೀಯಕ್ಕೆ ಕಾಂಗ್ರೆಸ್ ಸಿಎಎಯನ್ನು ವಿರೋಧಿಸುತ್ತಿದೆ ಎಂದು ಹೇಳಿದರು. 

ಹಿಂದೂ, ಬೌದ್ಧ, ಜೈನ ಮತ್ತು ಸಿಖ್ ಸಮುದಾಯದವರಿಗೆ ಸಿಎಎ ಮೂಲಕ ಪೌರತ್ವ ನೀಡಿ ಇವರನ್ನು ಗೌರವಿಸುವ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿದರು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.