ಸೂರತ್: ‘ಕರ್ನಾಟಕದಲ್ಲಿ ಅಮೂಲ್ ಉತ್ಪನ್ನಗಳನ್ನು ಬಹಿಷ್ಕರಿಸುವ ಅಗತ್ಯವಿಲ್ಲ’ ಎಂದು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮಂಗಳವಾರ ಹೇಳಿದ್ದಾರೆ.
ಇತ್ತೀಚೆಗೆ ಅಮೂಲ್ ಜೊತೆ ಕೆಎಂಎಫ್ ವಿಲೀನಗೊಳಿಸುವ ಕುರಿತ ಚರ್ಚೆ ಶುರುವಾಗಿತ್ತು. ಇದಕ್ಕೆ ಭಾರಿ ವಿರೋಧವೂ ವ್ಯಕ್ತವಾಗಿತ್ತು. ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಅಮೂಲ್ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ಕಲ್ಪಿಸುವ ಮೂಲಕ ನಂದಿನಿ ಬ್ರ್ಯಾಂಡ್ ಅನ್ನು ನಾಶಗೊಳಿಸಲು ಮುಂದಾಗಿದೆ ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಆರೋಪಿಸಿದ್ದವು.
‘ನನ್ನ ಪ್ರಕಾರ ಅಮೂಲ್ ಉತ್ಪನ್ನಗಳನ್ನು ಬಹಿಷ್ಕರಿಸುವ ಅಗತ್ಯವಿಲ್ಲ. ಒಂದೊಮ್ಮೆ ಅಮೂಲ್ ಏನನ್ನಾದರೂ ಕಿತ್ತುಕೊಳ್ಳಲು ಮುಂದಾಗಿದ್ದರೆ, ಮತ್ತೊಂದು ಬ್ರ್ಯಾಂಡ್‌ನ ಅವನತಿಗೆ ಕಾರಣವಾಗಬಹುದಾಗಿದ್ದರೆ ಇದಕ್ಕೆ ಪ್ರತಿಭಟನೆ ವ್ಯಕ್ತಪಡಿಸಲೇಬೇಕಾಗುತ್ತದೆ’ ಎಂದು ಪಟೇಲ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.