ಮುಂಬೈ: ಕೊಳಗೇರಿಯಿಂದಲೇ ತುಂಬಿರುವ ಮುಂಬೈನ ಧಾರಾವಿ ಪ್ರದೇಶದಲ್ಲಿ ಕಳೆದ ಏಪ್ರಿಲ್‌ನಿಂದೀಚೆಗೆ ಇದೇ ಮೊದಲ ಬಾರಿಗೆ 24 ಗಂಟೆಗಳ ಅವಧಿಯಲ್ಲಿ ಯಾವುದೇ ಹೊಸ ಕೋವಿಡ್ ಪ್ರಕರಣ ದಾಖಲಾಗಿಲ್ಲ.
ಪಾಲಿಕೆ ಅಧಿಕಾರಿಗಳು ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದು, ಏಪ್ರಿಲ್‌ನಲ್ಲಿ ಮೊದಲ ಪ್ರಕರಣ ಪತ್ತೆಯಾದ ಬಳಿಕ ಇಲ್ಲಿ ನಿತ್ಯ ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಲೇ ಇದ್ದವು. ವಿಶ್ವದ ಅತಿ ಹೆಚ್ಚು ಜನ ದಟ್ಟಣೆಯ ಪ್ರದೇಶವಾದ ಧಾರಾವಿ ಪ್ರದೇಶದಲ್ಲಿ ಇದೇ ಮೊದಲ ಬಾರಿಗೆ ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿಲ್ಲ..
ಸದ್ಯ, ಧಾರಾವಿಯಲ್ಲಿ 3,788 ಕೋವಿಡ್ ಪ್ರಕರಣಗಳಿದ್ದು, ಅದರಲ್ಲಿ ಕೇವಲ 12 ಸಕ್ರಿಯ ಪ್ರಕರಣಗಳಾಗಿವೆ. 8 ಮಂದಿ ಹೋಮ್ ಐಸೋಲೇಶನ್‌ನಲ್ಲಿದ್ದು, 4 ಜನ ಕೋವಿಡ್ ಕೇರ್ ಸೆಂಟರ್‌ನಲ್ಲಿ ಚೇತರಿಸಕೊಳ್ಳುತ್ತಿದ್ದಾರೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.
2.5 ಚದರ ಕಿಲೋಮೀಟರ್ ವ್ಯಾಪ್ತಿಯಲ್ಲಿ 6.5 ಲಕ್ಷ ಜನ ವಾಸವಿರುವ ಈ ಪ್ರದೇಶದಲ್ಲಿ ಇದುವರೆಗೆ 3,464 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.