ಜೈಪುರ: ಬಿಜೆಪಿ ಒಂದು ಕುಟುಂಬ, ಒಬ್ಬ ವ್ಯಕ್ತಿ ಅಥವಾ ನಾಯಕನ ಪಕ್ಷವಲ್ಲ, ಇದು ಸಿದ್ಧಾಂತ ಆಧಾರಿತ ಪಕ್ಷವಾಗಿದ್ದು, ಪ್ರತಿಯೊಬ್ಬ ಕಾರ್ಯಕರ್ತರನ್ನು ಗೌರವಿಸಲಾಗುತ್ತದೆ ಎಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜಸ್ಥಾನದ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ಹೇಳಿದ್ದಾರೆ.
ಸದಸ್ಯತ್ವ ಅಭಿಯಾನ ಕುರಿತು ರಾಜ್ಯ ಮಟ್ಟದ ಕಾರ್ಯಾಗಾರ ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಎಂದಿಗೂ ತನ್ನ ಆದರ್ಶಗಳಲ್ಲಿ ರಾಜಿ ಮಾಡಿಕೊಂಡಿಲ್ಲ. ಈ ಕಾರಣಕ್ಕಾಗಿಯೇ ಬಿಜೆಪಿ ಇಂದು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಪಕ್ಷವಾಗಿ ಬೆಳೆದಿದೆ ಎಂದು ಅವರು ಹೇಳಿದರು.
ಭಾರತೀಯ ಜನತಾ ಪಕ್ಷ ಸಿದ್ಧಾಂತ ಆಧಾರಿತ ಪಕ್ಷವಾಗಿದ್ದು, ಸಂಘಟನೆಯೇ ಪಕ್ಷಕ್ಕೆ ಅತಿ ದೊಡ್ಡ ಶಕ್ತಿ ಎಂದು ಹೇಳಿದರು.
ಪ್ರತಿ ಮತಗಟ್ಟೆಯಲ್ಲೂ 200 ಸದಸ್ಯರನ್ನು ಹೊಸದಾಗಿ ಪಕ್ಷಕ್ಕೆ ಸೇರಿಸುವ ಗುರಿಯನ್ನು ಕೇಂದ್ರ ನಾಯಕರು ಹೊಂದಿದ್ದಾರೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಮದನ್ ರಾಥೋಡ್ ಹೇಳಿದ್ದಾರೆ.
ಬಾಂಗ್ಲಾದೇಶದಲ್ಲಿನ ರಾಜಕೀಯ ಅವ್ಯವಸ್ಥೆ ಮತ್ತು ಅರಾಜಕತೆಯನ್ನು ಭಾರತ ಮತ್ತು ರಾಜಸ್ಥಾನದಲ್ಲಿ ಸೃಷ್ಟಿಸಲು ವಿರೋಧ ಪಕ್ಷಗಳು ಬಯಸುತ್ತಿವೆ ಎಂದು ಅವರು ಹೇಳಿದರು.
ಸೆಪ್ಟೆಂಬರ್ 4 ಮತ್ತು 5ರಂದು ಜಿಲ್ಲೆಗಳಲ್ಲಿ ಅಭಿಯಾನ ಪ್ರಾರಂಭಿಸಲಾಗುವುದು ಎಂದು ಬಿಜೆಪಿ ಸದಸ್ಯತ್ವ ಅಭಿಯಾನದ ರಾಜ್ಯ ಸಂಚಾಲಕ ಅರುಣ್ ಚತುರ್ವೇದಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.