ನವದೆಹಲಿ: ಶ್ರೀಲಂಕಾದಲ್ಲಿ ಸಂಭವಿಸಿದ ಸರಣಿ ಸ್ಫೋಟಗಳನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ.
ಲೋಕಸಭಾ ಚುನಾವಣೆ ಪ್ರಚಾರದಲ್ಲಿರುವ ಅವರು ಮಧ್ಯಾಹ್ನ ಟ್ವೀಟ್ ಮಾಡಿ, ‘ಶ್ರೀಲಂಕಾದಲ್ಲಿ ಸಂಭವಿಸಿದ ಭೀಕರ ಸ್ಫೋಟಗಳನ್ನು ಖಂಡಿಸುತ್ತೇನೆ. ಇಂತಹ ಕ್ರೌರ್ಯಕ್ಕೆ ನಮ್ಮ ಪ್ರದೇಶದಲ್ಲಿ ಆಸ್ಪದವಿಲ್ಲ. ಶ್ರೀಲಂಕಾದ ಜನತೆ ಜತೆ ಭಾರತವಿದೆ. ಘಟನೆಗೆ ನನ್ನ ಸಂತಾಪಗಳು. ಗಾಯಾಳುಗಳ ಚೇತರಿಕೆಗಾಗಿ ಪ್ರಾರ್ಥಿಸುತ್ತೇನೆ’ ಎಂದು ಬರೆದಿದ್ದಾರೆ.
‘ಶ್ರೀಲಂಕಾದಲ್ಲಿ ನಡೆದ ಉಗ್ರ ದಾಳಿಯನ್ನು ಭಾರತ ಖಂಡಿಸುತ್ತದೆ. ಮುಗ್ಧ ಜನರನ್ನು ಗುರಿಯಾಗಿಸಿ ನಡೆಸುವ ಇಂತಹ ಪ್ರಜ್ಞಾಶೂನ್ಯ ಹಿಂಸಾಚಾರಕ್ಕೆ ನಾಗರಿಕ ಸಮಾಜದಲ್ಲಿ ಜಾಗವಿಲ್ಲ. ಶ್ರೀಲಂಕಾದ ಜತೆ ನಾವಿದ್ದೇವೆ’ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಟ್ವೀಟ್ ಮಾಡಿದ್ದಾರೆ.
ಭಾನುವಾರ ಬೆಳಿಗ್ಗೆ ಶ್ರೀಲಂಕಾದ ಮೂರು ಚರ್ಚ್, ಎರಡು ಐಷಾರಾಮಿ ಹೋಟೆಲ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಸಂಭವಿಸಿದಬಾಂಬ್ ಸ್ಫೋಟಗಳಲ್ಲಿ 156 ಮಂದಿ ಮೃತಪಟ್ಟಿದ್ದು, ಸುಮಾರು 400 ಜನ ಗಾಯಗೊಂಡಿದ್ದಾರೆ. ಮೃತರ ಪೈಕಿ35 ಜನ ಹೊರ ರಾಷ್ಟ್ರದವರು ಎನ್ನಲಾಗಿದೆ.
ಇನ್ನಷ್ಟು...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.