ADVERTISEMENT

ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸುವ ಯೋಜನೆಯಿಲ್ಲ: ಸರ್ಕಾರ

ಪಿಟಿಐ
Published 23 ಮಾರ್ಚ್ 2022, 10:17 IST
Last Updated 23 ಮಾರ್ಚ್ 2022, 10:17 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯಲ್ಲಿ ಯಾವುದೇ ಪ್ರಸ್ತಾವ ಸರ್ಕಾರದ ಪರಿಗಣನೆಯಲ್ಲಿಲ್ಲ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ರಾವ್‌ ಸಾಹೇಬ್‌ ಪಾಟೀಲ್‌ ದಾನ್ವೆ ಬುಧವಾರ ಹೇಳಿದರು.

ಪ್ರಶ್ನೋತ್ತರ ಅವಧಿಯಲ್ಲಿ ಲೋಕಸಭೆಗೆ ಮಾಹಿತಿ ನೀಡಿದ ಅವರು, ಕೊಂಕಣ ರೈಲ್ವೆಯು ಒಂದು ನಿಗಮವಾಗಿದ್ದು ಕೇಂದ್ರ ಸರ್ಕಾರ ಇದಕ್ಕೆ ಸಹಾಯ ಮಾಡುತ್ತಿದೆ. ಆದ್ದರಿಂದ ಸದ್ಯದ ಪರಿಸ್ಥಿತಿಯಲ್ಲಿ ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆ ಜೊತೆ ಸೇರಿಸುವ ಯಾವುದೇ ಪ್ರಸ್ತಾವನೆ ಇಲ್ಲ’ ಎಂದು ಹೇಳಿದರು.

ಕೊಂಕಣ ರೈಲ್ವೆಯು ಮಂಗಳೂರಿನಿಂದ ಮುಂಬೈಗೆ ಸಂಪರ್ಕ ಕಲ್ಪಿಸುತ್ತದೆ. 741 ಕಿ.ಮೀ.ಉದ್ದದ ರೈಲು ಮಾರ್ಗವು ಪಶ್ಚಿಮ ಕರಾವಳಿಯಲ್ಲಿ ಮಹಾರಾಷ್ಟ್ರ, ಗೋವಾ ಮತ್ತು ಕರ್ನಾಟಕವನ್ನು ಹಾದು ಹೋಗುತ್ತದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.