ನವದೆಹಲಿ: ‘ಸಂಸ್ಕೃತವನ್ನು ಸಂವಹನ ಮತ್ತು ಅಧಿಕೃತ ಭಾಷೆಯನ್ನಾಗಿ ಮಾಡುವ ಯಾವುದೇ ಪ್ರಸ್ತಾವ ಸರ್ಕಾರದ ಪರಿಶೀಲನೆಯಲ್ಲಿಲ್ಲ’ ಎಂದು ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಲೋಕಸಭೆಯಲ್ಲಿ ಮಂಗಳವಾರ ತಿಳಿಸಿದ್ದಾರೆ.
ಬಿಜೆಪಿ ಸದಸ್ಯ ಸುಬ್ರತ್ ಪಾಠಕ್ ಅವರು, ‘ಹಿಂದಿ ಭಾಷೆಯ ಜೊತೆಗೆ ಸಂಸ್ಕೃತವನ್ನೂ ಸಂವಹನ ಮತ್ತು ಅಧಿಕೃತ ಭಾಷೆಯನ್ನಾಗಿ ಮಾಡಲು ಸರ್ಕಾರ ಚಿಂತಿಸುತ್ತಿದೆಯೇ’ ಎಂದು ಕೇಳಿದ ಪ್ರಶ್ನೆಗೆ ಮಿಶ್ರಾ ಅವರು ನೀಡಿರುವ ಲಿಖಿತ ಉತ್ತರದಲ್ಲಿ ಈ ವಿಷಯ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.