ADVERTISEMENT

ಯಾವುದೇ ಧರ್ಮ ಮಾಲಿನ್ಯವನ್ನು ಉತ್ತೇಜಿಸುವುದಿಲ್ಲ: ಪಟಾಕಿ ನಿಷೇಧದ ಬಗ್ಗೆ SC

ಪಿಟಿಐ
Published 11 ನವೆಂಬರ್ 2024, 9:42 IST
Last Updated 11 ನವೆಂಬರ್ 2024, 9:42 IST
<div class="paragraphs"><p>ಸುಪ್ರೀಂ ಕೋರ್ಟ್</p></div>

ಸುಪ್ರೀಂ ಕೋರ್ಟ್

   

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಟಾಕಿ ನಿಷೇಧವನ್ನು ಸಮಗ್ರವಾಗಿ ಜಾರಿಗೊಳಿಸಲು ವಿಫಲರಾಗಿರುವ ಪೊಲೀಸರನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

ನ್ಯಾಯಮೂರ್ತಿಗಳಾದ ಅಭಯ್‌ ಎಸ್‌.ಓಕಾ ಮತ್ತು ಅಗಸ್ಟಿನ್‌ ಜಾರ್ಜ್‌ ಮಾಸಿಹ್‌ ಅವರ ಪೀಠವು ದೆಹಲಿ ಪೊಲೀಸ್ ಕಮಿಷನರ್‌ಗೆ ತಕ್ಷಣವೇ ಪಟಾಕಿ ನಿಷೇಧ ಆದೇಶದ ಬಗ್ಗೆ ಸಂಬಂಧಿಸಿದ ಎಲ್ಲಾ ಪಟಾಕಿ ತಯಾರಕರಿಗೆ ತಿಳಿಸಲು ಮತ್ತು ಪಟಾಕಿಗಳ ಮಾರಾಟ ಹಾಗೂ ತಯಾರಿಕೆಯನ್ನು ಖಚಿತಪಡಿಸಿಕೊಳ್ಳುವಂತೆ ನಿರ್ದೇಶಿಸಿದೆ.

ADVERTISEMENT

ಪಟಾಕಿಗಳ ಮೇಲಿನ ನಿಷೇಧವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ವಿಶೇಷ ಘಟಕವೊಂದನ್ನು ತೆರೆಯುವಂತೆ ನಾವು ದೆಹಲಿ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡುತ್ತೇವೆ. ಜತೆಗೆ, ಪಟಾಕಿ ನಿಷೇಧವನ್ನು ಜಾರಿಗೊಳಿಸಲು ತೆಗೆದುಕೊಂಡ ಕ್ರಮಗಳನ್ನು ದಾಖಲಿಸುವ ಮೂಲಕ ವೈಯಕ್ತಿಕ ಅಫಿಡವಿಟ್ ಅನ್ನು ಸಲ್ಲಿಸುವಂತೆಯೂ ನಿರ್ದೇಶಿಸುತ್ತೇವೆ ಎಂದೂ ನ್ಯಾಯಪೀಠ ಹೇಳಿದೆ.

ಸಂವಿಧಾನದ 21ನೇ ಪರಿಚ್ಛೇದದ ಅಡಿಯಲ್ಲಿ ಮಾಲಿನ್ಯ ಮುಕ್ತ ವಾತಾವರಣದಲ್ಲಿ ಬದುಕುವ ಹಕ್ಕು ಎಲ್ಲರಿಗೂ ಇದೆ. ಯಾವುದೇ ಧರ್ಮವು ಮಾಲಿನ್ಯವನ್ನು ಉತ್ತೇಜಿಸುವ ಅಥವಾ ಜನರ ಆರೋಗ್ಯದೊಂದಿಗೆ ರಾಜಿ ಮಾಡಿಕೊಳ್ಳುವ ಯಾವುದೇ ಚಟುವಟಿಕೆಯನ್ನು ಉತ್ತೇಜಿಸುವುದಿಲ್ಲ ಎಂದು ನಾವು ಭಾವಿಸುತ್ತೇವೆ ಎಂದು ನ್ಯಾಯಪೀಠ ತಿಳಿಸಿದೆ.

ನವೆಂಬರ್ 25ರೊಳಗೆ ಪಟಾಕಿ ತಯಾರಕೆದಾರರೊಂದಿಗೆ ಚರ್ಚೆ ನಡೆಸಿ ಶಾಶ್ವತ ಪಟಾಕಿ ನಿಷೇಧದ ಬಗ್ಗೆ ನಿರ್ಧರಿಸುವಂತೆ ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತಾಕೀತು ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.