ನವದೆಹಲಿ: ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜನರು ಹಸಿವಿನಿಂದ ಮೃತಪಟ್ಟ ವರದಿ ಇಲ್ಲ ಎಂದು ಕೇಂದ್ರ ಸರ್ಕಾರ ಶುಕ್ರವಾರ ಲೋಕಸಭೆಯಲ್ಲಿ ಮಾಹಿತಿ ನೀಡಿದೆ.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೇಂದ್ರ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು, ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತದ ವಾಸ್ತವ ಸ್ಥಿತಿಯನ್ನು ಸರಿಯಾಗಿ ತಿಳಿಸಿಲ್ಲ ಎಂದು ಹೇಳಿದರು.
2022ನೇ ಸಾಲಿನ ಜಾಗತಿಕ ಹಸಿವು ಸೂಚ್ಯಂಕದಲ್ಲಿ 127 ರಾಷ್ಟ್ರಗಳ ಪೈಕಿ ಭಾರತ 107ನೇ ಸ್ಥಾನ ಪಡೆದಿದೆ.ದೇಶದಲ್ಲಿ ಮಕ್ಕಳ ಅಪೌಷ್ಟಿಕತೆ ಪ್ರಮಾಣವು ಶೇ 19.3ರಷ್ಟಿದ್ದು, ವಿಶ್ವದಲ್ಲಿಯೇ ಅತ್ಯಧಿಕವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.