ADVERTISEMENT

ಹಿರಿಯ ನಟಿ ಜಯಪ್ರದಾ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

ಏಜೆನ್ಸೀಸ್
Published 7 ಮಾರ್ಚ್ 2020, 10:33 IST
Last Updated 7 ಮಾರ್ಚ್ 2020, 10:33 IST
ಹಿರಿಯ ನಟಿ ಮತ್ತು ಬಿಜೆಪಿ ನಾಯಕಿ ಜಯಪ್ರದಾ
ಹಿರಿಯ ನಟಿ ಮತ್ತು ಬಿಜೆಪಿ ನಾಯಕಿ ಜಯಪ್ರದಾ   

ರಾಂಪುರ: ಲೋಕಸಭಾ ಚುನಾವಣೆ ವೇಳೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಉತ್ತರ ಪ್ರದೇಶದ ನ್ಯಾಯಾಲಯ ಹಿರಿಯ ನಟಿ ಮತ್ತು ಬಿಜೆಪಿ ನಾಯಕಿ ಜಯಪ್ರದಾ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.

2019ರ ಲೋಕಸಭಾ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ 57 ವರ್ಷದ ನಟಿ, ಬಿಜೆಪಿ ನಾಯಕಿ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಈ ಸಂಬಂಧ ವಾರೆಂಟ್ ಜಾರಿ ಮಾಡಿರುವ ನ್ಯಾಯಾಲಯ, ಪ್ರಕರಣದ ಮುಂದಿನ ವಿಚಾರಣೆಯನ್ನು ಏಪ್ರಿಲ್ 20ಕ್ಕೆ ಕೈಗೆತ್ತಿಕೊಳ್ಳುವುದಾಗಿತಿಳಿಸಿದೆ.

ADVERTISEMENT

ಲೋಕಸಭಾ ಚುನಾವಣೆಯಲ್ಲಿ ರಾಂ​ಪುರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜಯಪ್ರದಾ ಅವರು, ಸಮಾಜವಾದಿ ಪಕ್ಷದ ಅಜಂ ಖಾನ್ ವಿರುದ್ಧ 1 ಲಕ್ಷ ಮತಗಳ ಅಂತರದಲ್ಲಿ ಸೋತಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.