ನವದೆಹಲಿ:ಇಸ್ರೇಲ್‌ನ ಪೆಗಾಸಸ್ ಕುತಂತ್ರಾಂಶದ ಕಾನೂನು ಬಾಹಿರ ಬಳಕೆ ಕುರಿತ ತನಿಖೆಗೆ ಕೇಂದ್ರ ಸರ್ಕಾರ ಸಹಕಾರ ನೀಡಿಲ್ಲ ಎಂದ ಸುಪ್ರೀಂಕೋರ್ಟ್ ರಚಿಸಿದ ಸಮಿತಿಯ ವರದಿಗೆ ಸಂಬಂಧಿಸಿದಂತೆ ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಶುಕ್ರವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
‘ತನಿಖೆಗೆ ಸಹಕಾರ ನೀಡಲುಸರ್ಕಾರ ನಿರಾಕರಿಸಿದೆ. ಪರೀಕ್ಷೆಗಾಗಿ ತಾಂತ್ರಿಕ ಸಮಿತಿಗೆ ಒದಗಿಸಲಾಗಿದ್ದ 29 ಮೊಬೈಲ್‌ಗಳ ಪೈಕಿ ಐದು ಮೊಬೈಲ್‌ಗಳಲ್ಲಿ ಒಂದು ಬಗೆಯ ಕುತಂತ್ರಾಂಶ ಪತ್ತೆಯಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಈ ‘ಅಸಹಕಾರ’ವೇಅಪರಾಧದ ಸಾಕ್ಷಿ. ಇದು ಸರ್ಕಾರ ಶುದ್ಧವಾಗಲು ಸಕಾಲ’ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಪೆಗಾಸಸ್ ಬಳಸಿ ವಿರೋಧ ಪಕ್ಷಗಳ ನಾಯಕರು, ಪತ್ರಕರ್ತರು, ಸಾಮಾಜಿಕ ಹೋರಾಟಗಾರರು ಹಾಗೂ ಇತರರ ಮೇಲೆ ಬೇಹುಗಾರಿಕೆ ನಡೆಸಿರುವ ಆರೋಪ ಕೇಳಿಬಂದಿತ್ತು. ಕಳೆದ ವರ್ಷ ಸುಪ್ರೀಂಕೋರ್ಟ್ ಪ್ರಕರಣದ ತನಿಖೆಗೆ ಆದೇಶಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.