ನವದೆಹಲಿ: ಸುಕೇಶ್ ಚಂದ್ರಶೇಖರ್ ಮತ್ತು ಸಹಚರರ ವಿರುದ್ಧ ನಡೆಯುತ್ತಿರುವ ₹200 ಕೋಟಿ ಹಣ ಅಕ್ರಮ ವರ್ಗಾವಣೆ ಹಾಗೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ನೋರಾ ಫತೇಹಿ ಹೇಳಿಕೆ ದಾಖಲಿಸಿಕೊಳ್ಳಲು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶುಕ್ರವಾರ ಹಲವು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ 30 ವರ್ಷದ ನೋರಾ ಫತೇಹಿ ಈ ಹಿಂದೆಯೂ ವಿಚಾರಣೆಗೆ ಹಾಜರಾಗಿದ್ದರು.
ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌ಎ) ನೋರಾ ಫತೇಹಿ ಹೇಳಿಕೆಯನ್ನು ದಾಖಲಿಸಲಾಗಿದೆ.
ಈಗಾಗಲೇ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಆರೋಪಿ ಎಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿರುವ ಜಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.
ಹೈ ಪ್ರೊಫೈಲ್ ವ್ಯಕ್ತಿಗಳನ್ನು ವಂಚಿಸಿ ಬಾಲಿವುಡ್ ನಟಿಯರಿಗೆ ಬೆಲೆ ಬಾಳುವ ವಸ್ತುಗಳನ್ನು ಉಡುಗೊರೆಯಾಗಿ ನೀಡಲು ಚಂದ್ರಶೇಖರ್ ಅಕ್ರಮ ಹಣವನ್ನು ಬಳಕೆ ಮಾಡಿದ್ದಾರೆ ಎಂದು ವಿಚಾರಣೆ ವೇಳೆ ಬಯಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.