ನವದೆಹಲಿ: ಅಪಾಯಕಾರಿ ಕೃಷಿ ತ್ಯಾಜ ಸುಡುವ ಪರಿಣಾಮ ಉತ್ತರ ಭಾರತ ವೈದ್ಯಕೀಯ ತುರ್ತು ಸ್ಥಿತಿ ಎದುರಿಸುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅತಿಶಿ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮಾಲಿನ್ಯದ ವಿಷಯದಲ್ಲಿ ರಾಜಕೀಯ ಮಾಡುತ್ತಿದೆ. ಬಿಜೆಪಿ ಆಡಳಿತವಿರುವ ಹರಿಯಾಣ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಕೃಷಿ ತ್ಯಾಜ್ಯ ಸುಡುತ್ತಿರುವುದರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಆರೋಪಿಸಿದರು.
ಇದೇ ವೇಳೆ ಎಎಪಿ ಆಡಳಿತವಿರುವ ಪಂಜಾಬ್ ಅನ್ನು ಶ್ಲಾಘಿಸಿದ ಅವರು, ಪಂಜಾಬ್‌ನಲ್ಲಿ ಕೃಷಿ ತ್ಯಾಜ್ಯ ಸುಡುವ ಪ್ರವೃತ್ತಿ ಕಡಿಮೆಯಾಗಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಏರಿಕೆಯಾಗಿವೆ ಎಂದರು.
ದೆಹಲಿಯಲ್ಲಿ ಗಾಳಿ ಗುಣಮಟ್ಟ ಕಳಪೆಯಾಗಿದೆ. ಇದರಿಂದಾಗಿ ವಯೋವೃದ್ಧರು ಆಸ್ಪತ್ರೆ ಸೇರುತ್ತಿದ್ದಾರೆ, ಪುಟ್ಟ ಮಕ್ಕಳಿಗೆ ಉಸಿರಾಡಲು ಇನ್ಹೇಲರ್ ಮತ್ತು ಸ್ಟಿರಾಯ್ಡ್ ಬೇಕಾಗಿದೆ. ಈಗಾಗಲೆ ಟ್ರಕ್ ಪ್ರವೇಶ ನಿಷೇಧ, ಕಾಮಗಾರಿಗಳ ಸ್ಥಗಿತ ಸೇರಿದಂತೆ ಹಲವು ನಿಯಮಗಳನ್ನು ಜಾರಿಗೆ ತರಲಾಗಿದೆ ಎಂದು ವಿವರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.