ಮುಂಬೈ: ರಾಷ್ಟ್ರಪತಿ ಆಯ್ಕೆಗಾಗಿ ಮುಂದಿನ ವರ್ಷ ನಡೆಯಲಿರುವ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿರುವ ಎನ್‌ಸಿಪಿ ವರಿಷ್ಠ ಶರದ್ ಪವಾರ್, ತಾನು 2024ರ ಲೋಕಸಭಾ ಚುನಾವಣೆಯ ಪ್ರಧಾನಿ ಅಭ್ಯರ್ಥಿಯೂ ಅಲ್ಲ ಎಂದು ಬುಧವಾರ ಸ್ಪಷ್ಟಪಡಿಸಿದ್ದಾರೆ.
ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರು ರಾಹುಲ್ ಗಾಂಧಿ ಹಾಗೂ ಶಿವಸೇನಾ ಮುಖ್ಯ ವಕ್ತಾರ ಸಂಜತ್ ರಾವುತ್ ಅವರನ್ನು ಭೇಟಿ ಹಲವು ಊಹಾಪೋಹಗಳಿಗೆ ಕಾರಣವಾದ ಹಿನ್ನೆಲೆಯಲ್ಲಿ ಅವರು ಈ ಮಾತಿಗೆ ಮಹತ್ವ ಬಂದಿದೆ.
‘300ಕ್ಕೂ ಅಧಿಕ ಸಂಸದರನ್ನು ಹೊಂದಿರುವ ಪಕ್ಷ ಆಡಳಿತ ನಡೆಸುತ್ತಿದೆ. ಹೀಗಾಗಿ ರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಏನಾಗಲಿದೆ ಎಂಬುದು ನನಗೆ ತಿಳಿದಿದೆ. ನಾನು ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿ ಆಗಲಾರೆ’ ಎಂಬ ಅವರ ಹೇಳಿಕೆಯನ್ನು ಉಲ್ಲೇಖಿಸಿ ಸುದ್ದಿವಾಹಿನಿಯೊಂದು ವರದಿ ಮಾಡಿದೆ.
‘2024ರಲ್ಲಿ ನಡೆಯುವ ಲೋಕಸಭಾ ಚುನಾವಣೆ ಅಥವಾ ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಗಳ ಬಗ್ಗೆ ಈಗ ಯಾವ ನಿರ್ಧಾರ ಕೈಗೊಂಡಿಲ್ಲ. ಚುನಾವಣೆಗಳು ಇನ್ನೂ ದೂರ ಇವೆ. ಅಲ್ಲದೇ, ರಾಜಕೀಯ ಸನ್ನಿವೇಶಗಳೂ ಬದಲಾಗುತ್ತಲೇ ಇರುತ್ತವೆ’ ಎಂದೂ ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.