ಲಖನೌ: ಸಾತ್ನಾ ಪೊಲೀಸರೊಂದಿಗೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮಧ್ಯಪ್ರದೇಶದ ಕುಖ್ಯಾತ ಕ್ರಿಮಿನಲ್ ಒಬ್ಬನನ್ನು ಎನ್‌ಕೌಂಟರ್ ಮಾಡಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಗುರುವಾರ ತಿಳಿಸಿದ್ದಾರೆ.
ಮೃತ ಆರೋಪಿ ಆನಂದ್ ಸಾಗರ್ ಸುಭಾಷ್ ಯಾದವ್ ಗುಂಪಿನ ಸದಸ್ಯನಾಗಿದ್ದು, ಜೋನಪುರ್, ಅಜಂಗಢ, ವಾರಾಣಸಿ ಮತ್ತು ಮಧ್ಯ ಪ್ರದೇಶದ ಸಾತ್ನಾದಲ್ಲಿ ಗ್ಯಾಂಗ್ ಸಕ್ರಿಯವಾಗಿದೆ ಎಂದು ಪೊಲೀಸ್ ವರದಿ ತಿಳಿಸಿದೆ.
ಗುರುವಾರ ಬೆಳಗ್ಗೆ ಬಕ್ಷಾ ಪೊಲೀಸ್ ಠಾಣೆ ವ್ಯಾಪ್ತಿಗೆ ಒಳಪಡುವ ಅಲಿಗಂಜ್ ಮಾರುಕಟ್ಟೆ ಬಳಿಯ ಜೋನಪುರ್–ಲಖನೌ ರಸ್ತೆಯಲ್ಲಿ ಆರೋಪಿಯನ್ನು ಎನ್‌ಕೌಂಟರ್ ಮಾಡಲಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ.
ಆರೋಪಿಯು 10 ದಿನಗಳ ಹಿಂದೆ ಸಾತ್ನಾದಲ್ಲಿ ವ್ಯಕ್ತಿಯೊಬ್ಬನನ್ನು ಕೊಂದು 15 ಲಕ್ಷ ರೂಪಾಯಿ ಲೂಟಿ ಮಾಡಿ ಜೋನಪುರ್‌ಕ್ಕೆ ಪರಾರಿಯಾಗಿದ್ದು, ಪೊಲೀಸರು ಆರೋಪಿಗಾಗಿ ಹುಡುಕಾಟದಲ್ಲಿ ತೊಡಗಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಪಾಲ್ ಶರ್ಮಾ ತಿಳಿಸಿದ್ದಾರೆ.
ಆರೋಪಿ ಸಾಗರ್ ಅಡಗುತಾಣದ ಬಗ್ಗೆ ಸತ್ನಾ ಪೊಲೀಸರು ಜೋನಪುರ್ ಜಿಲ್ಲೆಯ ಉತ್ತರ ಪ್ರದೇಶದ ಪೊಲೀಸರಿಗೆ ಮಾಹಿತಿ ನೀಡಿದ ನಂತರ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಕೂಂಬಿಂಗ್ ಕಾರ್ಯಚರಣೆ ವೇಳೆ ಎನ್‌ಕೌಂಟರ್ ನಡೆದಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಎನ್‌ಕೌಂಟರ್ ನಂತರ ಆರೋಪಿಯನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.