ನವದೆಹಲಿ: ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ಕೋ-ವಿನ್ ವೆಬ್‌ಸೈಟ್‌ನಲ್ಲಿ ಒಂದು ಮೊಬೈಲ್ ಸಂಖ್ಯೆ ಬಳಸಿ ಆರು ಮಂದಿಯ ಹೆಸರನ್ನು ನೋಂದಾಯಿಸಬಹುದಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯು ಶುಕ್ರವಾರ ತಿಳಿಸಿದೆ.
ಈ ಕುರಿತು ಪರಿಷ್ಕೃತ ಅಧಿಸೂಚನೆಯನ್ನು ಹೊರಡಿಸಿದೆ.
ಇದನ್ನೂ ಓದಿ:ಕೇರಳದಲ್ಲಿ ಹೊಸದಾಗಿ 41,668 ಕೋವಿಡ್ ಪ್ರಕರಣಗಳು ದೃಢ
ಈ ಹಿಂದೆ ಒಂದು ಮೊಬೈಲ್ ಸಂಖ್ಯೆ ಬಳಸಿ ಗರಿಷ್ಠ ನಾಲ್ಕು ಮಂದಿಗೆ ಮಾತ್ರ ಹೆಸರು ನೋಂದಾಯಿಸಲು ಅವಕಾಶ ನೀಡಲಾಗಿತ್ತು.
ಬಳಕೆದಾರರು ಕೋವಿಡ್ ಲಸಿಕೆ ಸ್ಥಿತಿಯನ್ನು ಬದಲಾಯಿಸುವ ಆಯ್ಕೆಯನ್ನು ನೀಡಲಾಗಿದೆ. ಈ ಮೂಲಕ ಡೇಟಾ ಎಂಟ್ರಿ ಹಾಗೂ ಕೋವಿಡ್ ಲಸಿಕೆ ಪ್ರಮಾಣಪತ್ರ ದೋಷವನ್ನು ಸರಿಪಡಿಸಲು ನೆರವಾಗಲಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.