ಗುವಾಹಟಿ: ಮಣಿಪುರದ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಬೆಂಬಲ ಹಿಂದಕ್ಕೆ ಪಡೆದ ಬೆನ್ನಲ್ಲೇ, ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಕರೆಯುವ ಯಾವುದೇ ಸಭೆಗಳಿಗೂ ಹಾಜರಾಗದಂತೆ ಶಾಸಕರಿಗೆ ಸೂಚನೆ ನೀಡಿದೆ.
‘ಮಾಧ್ಯಮಗಳಿಗೆ ಯಾವುದೇ ಅಧಿಕೃತ ಹೇಳಿಕೆ ನೀಡುವ ಮುನ್ನ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಕೋನ್ರಡ್ ಸಂಗ್ಮಾ ಅಥವಾ ರಾಜ್ಯ ಘಟಕದ ಅಧ್ಯಕ್ಷರಿಂದ ಅನುಮತಿ ಪಡೆಯಬೇಕು’ ಎಂದು ಎನ್‌ಪಿಪಿ ಮಣಿಪುರ ಘಟಕದ ಅಧ್ಯಕ್ಷ ಎನ್. ಕಯಿಸೀ ಅವರು ಸೂಚನೆ ನೀಡಿದ್ದಾರೆ.
‘ಈ ಮಾರ್ಗಸೂಚಿಗಳನ್ನು ಅನುಸರಿಸಲು ವಿಫಲವಾದರೆ, ಅಂತಹವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು’ ಎಂದು ಸ್ಪಷ್ಟಪಡಿಸಿದ್ದಾರೆ.
ನ.17ರಂದು ರಾತ್ರಿ ಮುಖ್ಯಮಂತ್ರಿ ಬಿರೇನ್ ಸಿಂಗ್ ಕರೆದ ಸಭೆಯಲ್ಲಿ ಎನ್‌ಪಿಪಿಯ ಮೂವರು ಶಾಸಕರು ಭಾಗಿಯಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.