ADVERTISEMENT

ನೀಟ್‌–ಯುಜಿ: ಪರಿಷ್ಕೃತ ರ್‍ಯಾಂಕ್ ಪಟ್ಟಿ ಬಿಡುಗಡೆ ಮಾಡಿದ NTA

ಪಿಟಿಐ
Published 1 ಜುಲೈ 2024, 6:36 IST
Last Updated 1 ಜುಲೈ 2024, 6:36 IST
ನೀಟ್‌
ನೀಟ್‌   

ನವದೆಹಲಿ: ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್–ಯುಜಿಯ ಪರಿಷ್ಕೃತ ರ್‍ಯಾಂಕ್ ಪಟ್ಟಿಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಟಿಎ) ಪ್ರಕಟಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೇ 5 ರಂದು ನಡೆದಿದ್ದ ನೀಟ್ ಪರೀಕ್ಷೆ ಸಂದರ್ಭ ಪರೀಕ್ಷೆ ವಿಳಂಬವಾಗಿ ಆರಂಭವಾದ 6 ಕೇಂದ್ರಗಳ ಅಭ್ಯರ್ಥಿಗಳಿಗೆ ನೀಡಲಾಗಿದ್ದ ಕೃಪಾಂಕ ರದ್ದುಪಡಿಸಿ ನಡೆಸಲಾದ ಮರು ಪರೀಕ್ಷೆ ಫಲಿತಾಂಶ ಪ್ರಕಟಿಸಿದ ಬಳಿಕ ಪರಿಷ್ಕೃತ ರ್‍ಯಾಂಕ್‌ ಪಟ್ಟಿ ಬಿಡುಗಡೆ ಮಾಡಲಾಗಿದೆ.

ಸುಪ್ರೀಂ ಕೋರ್ಟ್ ಆದೇಶದನ್ವಯ ಜೂನ್ 23ರಂದು 7 ಕೇಂದ್ರಗಳಲ್ಲಿ ಮರುಪರೀಕ್ಷೆ ನಡೆಸಲಾಗಿತ್ತು. 1,563 ವಿದ್ಯಾರ್ಥಿಗಳ ಪೈಕಿ ಶೇಕಡ 48ರಷ್ಟು ಮಂದಿ ಮಾತ್ರ ಪರೀಕ್ಷೆಗೆ ಹಾಜರಾಗಿದ್ದರು.

ADVERTISEMENT

1,563 ಅಭ್ಯರ್ಥಿಗಳ ಪೈಕಿ 813 ಮಂದಿ ಮಾತ್ರ ಮರುಪರೀಕ್ಷೆಗೆ ಹಾಜರಾಗಿದ್ದು, ಉಳಿದವರಿಗೆ ಕೃಪಾಂಕವನ್ನು ಬಿಟ್ಟು ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಫಲಿತಾಂಶ ನೀಡಲಾಗಿದೆ ಎಂದು ಎನ್‌ಟಿಎ ತಿಳಿಸಿದೆ.

ಚಂಡೀಗಢ ಕೇಂದ್ರದಲ್ಲಿ ಯಾವೊಬ್ಬ ಅಭ್ಯರ್ಥಿಯೂ ಮರುಪರೀಕ್ಷೆಗೆ ಹಾಜರಾಗಿರಲಿಲ್ಲ.

ಕೃಪಾಂಕ ನೀಡಿದ್ದ ಹಿನ್ನೆಲೆಯಲ್ಲಿ ಹರಿಯಾಣದ ಒಂದೇ ಪರೀಕ್ಷಾ ಕೇಂದ್ರದ 6 ಅಭ್ಯರ್ಥಿಗಳು 720 ಗಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಬಳಿಕ, ಕೃಪಾಂಕ ರದ್ದು ಮಾಡಿ ಮರುಪರೀಕ್ಷೆಗೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು.

ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ನೀಟ್ ಸುತ್ತ ಹಲವು ವಿವಾದಗಳು ಭುಗಿಲೆದ್ದಿದ್ದು, ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ಬಳಿಕ ಸಿಬಿಐ ತನಿಖೆಗೆ ಒಪ್ಪಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.